ದೇಶ

ಸುಕ್ಮಾ: ನಕ್ಸಲರ ವಿರುದ್ಧ ಸೇನೆ ಕಾರ್ಯಾಚರಣೆ- 5 ಯೋಧರಿಗೆ ಗಂಭೀರ ಗಾಯ

ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ವಿರುದ್ಧ ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದ್ದು, ಕಾರ್ಯಾಚರಣೆ ವೇಳೆ ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಯೋಧರಿಗೆ ಗಂಭೀರವಾದ ಗಾಯಗಳಾಗಿರುವ...

ಸುಕ್ಮಾ: ನಕ್ಸಲರ ವಿರುದ್ಧ ಸೇನೆ ಕಾರ್ಯಾಚರಣೆ- 5 ಯೋಧರಿಗೆ ಗಂಭೀರ ಗಾಯ
ಸಂಗ್ರಹ ಚಿತ್ರ
Published On :
ಸುಕ್ಮಾ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ವಿರುದ್ಧ ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದ್ದು, ಕಾರ್ಯಾಚರಣೆ ವೇಳೆ ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಯೋಧರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶನಿವಾರ ನಡೆದಿದೆ. 
ಚಿಂತಗುಫಾ ಪೊಲೀಸ್ ಠಾಣಾ ಪ್ರದೇಶದಲ್ಲಿರುವ ಅರಣ್ಯ ಪ್ರದೇಶದಲ್ಲಿ ನಕ್ಸಲರು ಬೀಡು ಬಿಟ್ಟಿರುವುದಾಗಿ ಖಚಿತ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ವಿಶೇಷ ಕಾರ್ಯಚರಣಾ ಪಡೆ ಹಾಗೂ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆಗಿಳಿದಿದ್ದರು. 
ಈ ವೇಳೆ ನಕ್ಸಲರು ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಐವರು ಯೋಧರು ಗಾಯಗೊಂಡಿದ್ದಾರೆ. ಗಾಯಗೊಂಡ ಐವರು ಯೋಧರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ. 
ಪ್ರಸ್ತುತ ಸ್ಥಳದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.