ಆಯೂಬ್ ಪಂಡಿತ್ ಹತ್ಯೆ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿ ವರ್ಗಾವಣೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ.
ಪೊಲೀಸ್ ಅಧೀಕ್ಷಕ (ಉತ್ತರ ಶ್ರೀನಗರ) ಸಾಜದ್ ಖಾಲಿಕ್ ಭಟ್ ಎಂಬುವವರನ್ನು ಪೊಲೀಸ್ ಮಹಾನಿರ್ದೇಶಕ ಎಸ್.ಪಿ.ವೈದ್ ಅವರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಆಯುಬ್ ಪಂಡಿತ್ ಅವರ ಪ್ರಕರಣ ಸಂಬಂಧ ಕೂಡಲೇ ವರದಿ ಸಲ್ಲಿಸುವಂತೆ ನಿನ್ನೆಯಷ್ಟೇ ವೈದ್ ಅವರು ಖಾಲಿಕ್ ಭಟ್ ಅವರಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಭಟ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ರಂಜಾನ್ ಪ್ರಾರ್ಥನೆ ಹಿನ್ನಲೆಯಲ್ಲಿ ಶ್ರೀನಗರ ಜಮಿಯಾ ಮಸೀದಿ ಬಳಿ ಆಯೂಬ್ ಪಂಡಿತ್ ಎಂಬ ಹಿರಿಯ ಪೊಲೀಸ್ ಅಧಿಕಾರಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಯ ಮೇಲೆ ಕಲ್ಲು ತೂರಾಟಗಾರರು ಮುಗಿಬಿದ್ದು, ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಹತ್ಯೆmurderಜಮ್ಮು ಮತ್ತು ಕಾಶ್ಮೀರJammu and Kashmirsecurity forcesಭದ್ರತಾ ಪಡೆಪೊಲೀಸ್ ಅಧಿಕಾರಿpolice officerವರ್ಗಾವಣೆtransferredstone-peltersಕಲ್ಲು ತೂರಾಟಗಾರರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


