ಕಾಶ್ಮೀರದಲ್ಲಿ ಸಿಆರ್ ಪಿಎಫ್ ವಾಹನದ ಮೇಲೆ ಉಗ್ರರ ದಾಳಿ: ಓರ್ವ ಯೋಧ ಹುತಾತ್ಮ, ಇಬ್ಬರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ಗಸ್ತು ವಾಹನ ಮೇಲೆ ಶಸ್ತ್ರ ಸಜ್ಜಿತ ಉಗ್ರರು...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ಗಸ್ತು ವಾಹನ ಮೇಲೆ ಶಸ್ತ್ರ ಸಜ್ಜಿತ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಯೋಧರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಸಂಜೆ 6.15ರ ಸುಮಾರಿಗೆ ಪಂತ್ ಚೌಕ್ ಬಸ್ ನಿಲ್ದಾಣದ ಬಳಿ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಸ್ತು ತಿರುಗುತ್ತಿದ್ದ ಸಿಆರ್ ಪಿಎಫ್ ವಾಹನದ ಮೇಲೆ ಉಗ್ರರು ಎಕೆ ರೈಫಲ್ ನಿಂದ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸಿಆರ್ ಪಿಎಫ್ ಅಧಿಕಾರಿ ತಿಳಿಸಿದ್ದಾರೆ.
ದಾಳಿಯಲ್ಲಿ ಗಾಯಗೊಂಡ ಮೂವರು ಯೋಧರನ್ನು ಶ್ರೀನಗರದ ಬಾದಾಮಿಬಾಘ್ ನಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸಬ್ ಇನ್ಸ್ ಪೆಕ್ಟರ್ ಸಹಬ್ ಶಕ್ಲಾ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ.
ದಾಳಿಯ ನಂತರ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದ್ದು, ಉಗ್ರರಿಗಾಗಿ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


