ದೇಶ

ಮತ್ತೆ 5 ತಮಿಳುನಾಡು ಮೀನುಗಾರರನ್ನು ಬಂಧನಕ್ಕೊಳಪಡಿಸಿದ ಶ್ರೀಲಂಕಾ ನೌಕಾಪಡೆ

ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿರುವ ಶ್ರೀಲಂಕಾ ನೌಕಾಪಡೆ ಮತ್ತೆ ಐವರು ತಮಿಳುನಾಡು ಮೀನುಗಾರರನ್ನು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ...

ಮತ್ತೆ 5 ತಮಿಳುನಾಡು ಮೀನುಗಾರರನ್ನು ಬಂಧನಕ್ಕೊಳಪಡಿಸಿದ ಶ್ರೀಲಂಕಾ ನೌಕಾಪಡೆ
ಸಂಗ್ರಹ ಚಿತ್ರ
Published On :
ರಾಮೇಶ್ವರ: ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿರುವ ಶ್ರೀಲಂಕಾ ನೌಕಾಪಡೆ ಮತ್ತೆ ಐವರು ತಮಿಳುನಾಡು ಮೀನುಗಾರರನ್ನು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. 
ಬಂಧಿತ ಮೀನುಗಾರರು ಥಂಗಚಿಮದಮ್ ಮೂಲದವರಾಗಿದ್ದು, ಪ್ರಸ್ತುತ ಮೀನುಗಾರರನ್ನು ಕಂಗೆಸಂತುರೈ ಬಂದರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. 
ನಿನ್ನೆ ಕೂಡ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 25 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧನಕ್ಕೊಳಪಡಿಸಿತ್ತು. ಇದರಂತೆ ಜೂನ್ ತಿಂಗಳಿನಲ್ಲಿ ಈ ವರೆಗೂ ಶ್ರೀಲಂಕಾ ಒಟ್ಟು 50 ಮೀನುಗಾರರನ್ನು ಬಂಧನಕ್ಕೊಳಪಡಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.