ದೇಶ

ತುರ್ತುಪರಿಸ್ಥಿತಿ ಕುರಿತು ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ತುರ್ತುಪರಿಸ್ಥಿತಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ಕೇಂದ್ರದ ಆಡಳಿತಾರೂಢ ಸರ್ಕಾರವೇ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿಯನ್ನು...

ತುರ್ತುಪರಿಸ್ಥಿತಿ ಕುರಿತು ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Published On :
ನವದೆಹಲಿ: ತುರ್ತುಪರಿಸ್ಥಿತಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ಕೇಂದ್ರದ ಆಡಳಿತಾರೂಢ ಸರ್ಕಾರವೇ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿಯನ್ನು ಹೇರಿದೆ ಎಂದು ಭಾನುವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಟಾಮ್ ವಡಕ್ಕನ್ ಅವರು, ದೇಶದ ಮೇಲೆ ಮೋದಿ ಸರ್ಕಾರವೇ ಅಘೋಷಿತ ತುರ್ತುಪರಿಸ್ಥಿತಿಯನ್ನು ಹೇರಿದೆ. ಎನ್ ಡಿಟಿವಿ ಮುಖ್ಯಸ್ಥ ಪ್ರಣಯ್ ರಾಯ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸುವ ಮೂಲಕ, ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರ ಹದಗೆಟ್ಟಿರುವ ವಾತಾವರಣವೇ ಇದಕ್ಕೆ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ. 
ನಾವು ತುರ್ತುಪರಿಸ್ಥಿತಿಯನ್ನು ಮರೆತಿಲ್ಲ. ಆದರೆ, ದೇಶದಲ್ಲಿ ಇದೀಗ ಆಘೋಷಿತ ತುರ್ತುಪರಿಸ್ಥಿತಿ ನಿರ್ಮಾಣವಾಗಿದೆ. ಮಾಧ್ಯಮಗಳನ್ನು ಹತ್ತಿಕ್ಕುವ ಪ್ರಯತ್ನಗಳನ್ನು ನಡೆಯುತ್ತಿದೆ. ಮಾಧ್ಯಮಗಳ ಮೇಲೆ ನಡೆಸುತ್ತಿರುವ ದಾಳಿಯೇ ತುರ್ತುಪರಿಸ್ಥಿತಿ ಹೇರಿರುವುದಕ್ಕೆ ಉದಾಹರಣೆಯಾಗಿದೆ. ಮನ್ ಕಿ ಬಾತ್ ನಲ್ಲಿ ಮಾತನಾಡಲು ಸಾಕಷ್ಟು ವಿಷಯಗಳಿತ್ತು. ಆಂತರಿಕ ಭದ್ರತೆಯ ಕುರಿತಂತೆ ಮಾತನಾಡಬಹುದಿತ್ತು.
ದೇಶದಲ್ಲಿಂದು ಆಂತರಿಕ ಭದ್ರತೆ ವೈಫಲ್ಯವಿದೆ. ಯಾಕೆ? ದೇಶದಲ್ಲಿ ಮೊದಲ ಬಾರಿಗೆ ಆಂತರಿಕ ಹಾಗೂ ಬಾಹ್ಯ ಭದ್ರತೆ ಧಕ್ಕೆಯುಂಟಾಗಿದೆ. ಪಾಕಿಸ್ತಾನದಲ್ಲಿರುವ ಉಗ್ರರು ಮತ್ತು ಪ್ರತ್ಯೇಕತಾವಾದಿಗಳು ದೇಶದೊಳಗಿದ್ದುಕೊಂಡು ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳೇ ಉಗ್ರರನ್ನು ಬೆಳೆಸುತ್ತಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.