ಹಳೆಯ ವಿಡಿಯೋ, ಪತ್ರಿಕಾ ವರದಿ ಉಲ್ಲೇಖಿಸಿ ಮೀರಾ ಕುಮಾರ್ ವಿರುದ್ಧ ಸುಷ್ಮಾ ಟೀಕೆ
ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ವಿರುದ್ಧ ಸುಷ್ಮಾ ಸ್ವರಾಜ್ ಟಿಕಾಪ್ರಹಾರ ನಡೆಸಿದ್ದು, 2013 ರಲ್ಲಿ ತಾವು ವಿಪಕ್ಷ ನಾಯಕಿಯಾಗಿದ್ದಾಗಿನ ಸಂಸತ್ ಕಲಾಪದ ವಿಡಿಯೋ...

Published On :
ನವದೆಹಲಿ: ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ವಿರುದ್ಧ ಸುಷ್ಮಾ ಸ್ವರಾಜ್ ಟಿಕಾಪ್ರಹಾರ ನಡೆಸಿದ್ದು, 2013 ರಲ್ಲಿ ತಾವು ವಿಪಕ್ಷ ನಾಯಕಿಯಾಗಿದ್ದಾಗಿನ ಸಂಸತ್ ಕಲಾಪದ ವಿಡಿಯೋ ಹಾಗೂ ಪತ್ರಿಕಾ ವರದಿಯನ್ನು ಉಲ್ಲೇಖಿಸಿದ್ದಾರೆ.
2013 ರಲ್ಲಿ ನಡೆದ ಬಜೆಟ್ ಅಧಿವೇಶನದ ಸಂಸತ್ ಕಲಾಪದಲ್ಲಿ ವಿಪಕ್ಷ ನಾಯಕಿಯಾಗಿದ್ದ ಸುಷ್ಮಾ ಸ್ವರಾಜ್ ಅವರು ಅಂದಿನ ಯುಪಿಎ ಸರ್ಕಾರದ ಹಗರಣಗಳ ಬಗ್ಗೆ ಮಾತನಾಡುತ್ತಾ, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಸ್ಪೀಕರ್ ಮೀರಾಕುಮಾರ್ "ಆಲ್ ರೈಟ್ ಥ್ಯಾಂಕ್ ಯೂ, ಓಕೆ" ನಾನು ಕಲಾಪವನ್ನು ಮುಂದುವರೆಸಬೇಕು ಎಂದು ಹೇಳಿ ಸುಷ್ಮಾ ಸ್ವರಾಜ್ ಅವರನ್ನು ತಡೆದಿದ್ದರು. ಈ ಮೂಲಕ ಸುಷ್ಮಾ ಸ್ವರಾಜ್ ಅವರ ಭಾಷಣವನ್ನು ಮೊಟಕುಗೊಳಿಸಲು ಯತ್ನಿಸಿದ್ದರು.
ಈ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸುಷ್ಮಾ ಸ್ವರಾಜ್, ಮೀರಾ ಕುಮಾರ್ ಸ್ಪೀಕರ್ ಆಗಿದ್ದಾಗ ವಿಪಕ್ಷ ನಾಯಕರನ್ನು ನಡೆಸಿಕೊಂಡ ರೀತಿ ಹೀಗಿದೆ ಎಂದು ಹೇಳಿ, ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯನ್ನು ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


