ಛತ್ತೀಸ್‍ಗಢದಲ್ಲಿ ನಕ್ಸಲರ ಅಟ್ಟಹಾಸ: 3 ಯೋಧರು ಹುತಾತ್ಮ, ಐವರಿಗೆ ಗಂಭೀರ ಗಾಯ
ಛತ್ತೀಸ್‍ಗಢದ ಸುಲ್ಮಾ ಜಿಲ್ಲೆಯಲ್ಲಿ ನಕ್ಸಲರು ಗುಂಡಿನ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ...

Published On :
ಸುಕ್ಮಾ: ಛತ್ತೀಸ್‍ಗಢದ ಸುಲ್ಮಾ ಜಿಲ್ಲೆಯಲ್ಲಿ ನಕ್ಸಲರು ಗುಂಡಿನ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.
ಸುಕ್ಮಾ ಜಿಲ್ಲೆಯ ಚಿಂತಗುಫ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಿಲ್ಲಾ ಮೀಸಲು ಸಿಬ್ಬಂದಿ ಮತ್ತು ವಿಶೇಷ ಕಾರ್ಯಪಡೆ ಜಂಟಿಯಾಗಿ ನಕ್ಸಲ್ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದು ಈ ವೇಳೆ ನಕ್ಸಲರು ಯೋಧರ ನಡುವೆ ಗುಂಡಿನ ಚಕಮಿಕಿ ನಡೆದಿದೆ. ಇದರಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು ಐವರು ಯೋಧರಿಗೆ ಗಂಭೀರ ಗಾಯಗಳಾಗಿವೆ ಎಂದು ಡಿಜಿಪಿ ಡಿಎಂ ಅವಸ್ಥಿ ಹೇಳಿದ್ದಾರೆ.
ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಓರ್ವ ನಕ್ಸಲ್ ನನ್ನು ಯೋಧರು ಹತ್ಯೆ ಮಾಡಿದ್ದು ಆತನ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ. ನಕ್ಸಲರ ಧಮನಕ್ಕೆ ಯೋಧರು ಕಾರ್ಯಾಚರಣೆ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


