ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ವಿರುದ್ಧ ಸುಷ್ಮಾ ಸ್ವರಾಜ್ ವಾಗ್ದಾಳಿ: ಕಾಂಗ್ರೆಸ್ ಆಕ್ರೋಶ
ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ಗುರಿಯಾಗಿಟ್ಟುಕೊಂಡು ಟ್ವೀಟ್ ಮಾಡಿರುವ ವಿದೇಶಾಂಗ...

Published On :
ನವದೆಹಲಿ: ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ಗುರಿಯಾಗಿಟ್ಟುಕೊಂಡು ಟ್ವೀಟ್ ಮಾಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ಹೇಳಿಕೆ ನೀಡಬಾರದು ಎಂದು ಹೇಳಿದೆ.
ತಮ್ಮನ್ನು ಸದನದಲ್ಲಿ ಮಾತನಾಡಲು ಸ್ಪೀಕರ್ ಆಗಿದ್ದ ಮೀರಾ ಕುಮಾರ್ ಅವರು ಬಿಡಲಿಲ್ಲ ಎಂದು ಸುಷ್ಮಾ ಸ್ವರಾಜ್ ಅವರ ಟ್ವೀಟ್ ನಿಂದ ಭಾವನೆ ಉಂಟಾಗುತ್ತದೆ. ಆದರೆ ವಾಸ್ತವ ಅದಲ್ಲ. ಸಂಸತ್ತಿನ ಕಾಲಾವಧಿಯಂತೆ ನಿಗದಿತ ಸಮಯದೊಳಗೆ ಮಾತು ಮುಗಿಸುವಂತೆ ಮೀರಾ ಅವರು ಹೇಳಿದ್ದರು. ಅದು ಲೋಕಸಭಾಧ್ಯಕ್ಷರ ಕರ್ತವ್ಯ ಕೂಡ ಹೌದು. ಇದು ಅಷ್ಟೊಂದು ಗಂಭೀರ ವಿಷಯ ಎಂದು ಅನಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ತೊಮ್ ವಡಕ್ಕನ್ ಎಎನ್ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾಂಗ್ರೆಸ್ ನ ಮತ್ತೊಬ್ಬ ನಾಯಕ ಎನ್.ಎ.ಹಾರ್ರಿಸ್ ಮಾತನಾಡಿ, ವಿಶ್ವಾಸಾರ್ಹತೆ ಹೊಂದಿರುವ ವ್ಯಕ್ತಿ ವಿರುದ್ಧ ಸುಷ್ಮಾ ಸ್ವರಾಜ್ ಅವರು ಈ ರೀತಿಯ ಹೇಳಿಕೆ ನೀಡಬಾರದು ಎಂದರು. ಮೀರಾ ಕುಮಾರ್ ಅವರು ಎಂತಹ ವ್ಯಕ್ತಿ ಎಂದು ಎಲ್ಲರಿಗೂ ಗೊತ್ತಿದೆ. ಅವರ ಕುಟುಂಬದ ಹಿನ್ನೆಲೆ ಕೂಡ ತಿಳಿದಿದೆ. ದಕ್ಷತೆ ಹೊಂದಿರುವ ವ್ಯಕ್ತಿ ವಿರುದ್ಧ ಈ ರೀತಿ ಮಾತನಾಡಬಾರದು. ಸುಷ್ಮಾ ಸ್ವರಾಜ್ ಅವರು ಸರ್ಕಾರದಲ್ಲಿ ಜವಾಬ್ದಾರಿಯುತ ಸ್ಥಾನ ಹೊಂದಿದ್ದಾರೆ ಎಂದು ಹಾರ್ರಿಸ್ ಹೇಳಿದರು.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿನ್ನೆ ವಿಡಿಯೊವೊಂದನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದರು. ಅದರಲ್ಲಿ ಮಾಜಿ ಲೋಕಸಭಾಧ್ಯಕ್ಷೆ ಮೀರಾ ಕುಮಾರ್, ಸುಷ್ಮಾ ಸ್ವರಾಜ್ ಅವರು ಲೋಕಸಭೆಯಲ್ಲಿ ಮಾತನಾಡುವಾಗ ಅಡ್ಡಿಪಡಿಸುತ್ತಿದ್ದರು. ಅದಕ್ಕೆ ಅಡಿಬರಹ ಬರೆದು, ಈ ರೀತಿ ಮೀರಾ ಕುಮಾರ್ ವಿರೋಧ ಪಕ್ಷದ ನಾಯಕರನ್ನು ಪರಿಗಣಿಸುತ್ತಿದ್ದರು ಎಂದು ಬರೆದಿದ್ದಾರೆ.
ಮೀರಾ ಕುಮಾರ್ 2009ರಿಂದ 2014ರವರೆಗೆ ಲೋಕಸಭಾಧ್ಯಕ್ಷರಾಗಿದ್ದರು. ಇದೀಗ ಎನ್ ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ವಿರುದ್ಧ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆಗೆ ನಿಂತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


