ದೇಶ

ಅಧಾರ್ ಕಡ್ಡಾಯ ವಿರುದ್ಧ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದ 'ಸುಪ್ರೀಂ'

ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದ ಕೇಂದ್ರಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ಹೇಳಿದೆ.

ಅಧಾರ್ ಕಡ್ಡಾಯ ವಿರುದ್ಧ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದ 'ಸುಪ್ರೀಂ'
ಸಂಗ್ರಹ ಚಿತ್ರ
Published On :

ನವದೆಹಲಿ: ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದ ಕೇಂದ್ರಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ಹೇಳಿದೆ.

ಅರ್ಜಿದಾರರಾದ ಶಾಂತಾಸಿನ್ಹಾ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಎಂಖಾನ್ವಿಲ್ಕರ್ ಹಾಗೂ ನವೀನ್ ಸಿನ್ಹಾ ಅವರು ಆಧಾರ್ ವಿಚಾರಕ್ಕೆ  ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ತನ್ನ ಸಾಮಾಜಿಕ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಆಧಾರ್ ಕಾರ್ಡ್  ಕಡ್ಡಾಯಗೊಳಿಸಿತ್ತು. ಇದನ್ನು ಪ್ರಶ್ನಿಸಿ ಶಾಂತಾಸಿನ್ಹಾ ಎಂಬುವವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಹಿಂದಿನ ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲ ಶ್ಯಾಮ್ ದಿವಾನ್ ಅವರು, ಕೇಂದ್ರ ಸರ್ಕಾರದ ನಿರ್ಧಾರದಿಂದಾಗಿ ಮಧ್ಯಾಹ್ನ ಬಿಸಿಯೂಟ ಪಡೆಯುತ್ತಿರುವ ವಿದ್ಯಾರ್ಥಿಗಳು ಇದೀಗ ವಂಚಿತರಾಗಲಿದ್ದಾರೆ. ಹೀಗಾಗಿ ಕೇಂದ್ರ  ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಮಧ್ಯಂತ ಆದೇಶ ನೀಡಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆಧಾರ್ ಕಾರ್ಡ್ ಇಲ್ಲದ ಕಾರಣ ಮಧ್ಯಾಹ್ನದ  ಬಿಸಿಯೂಟ ನಿರಾಕರಿಸಲ್ಪಟ್ಟ ವಿದ್ಯಾರ್ಥಿಗಳನ್ನು ತೋರಿಸಿ ಎಂದು ಕೇಳಿತ್ತು. ಅಲ್ಲದೆ ಆಧಾರ್ ಕಾರ್ಡ್ ಇಲ್ಲದ ಕಾರಣಕ್ಕಾಗಿ ಕೇಂದ್ರ ಸರ್ಕಾರದ ಯೋಜನೆಗಳಿಂದ ವಚಿತರಾಗಿರುವವರ ಪಟ್ಟಿ ಮಾಡಿ ಕೊಡಿ ಎಂದು ಕೇಳಿದೆ.

ಅಂತೆಯೇ ಕೇವಲ ಹೇಳಿಕೆ ಆಧಾರದ ಮೇಲೆ ಕೋರ್ಟ್ ಆದೇಶ ನೀಡಲು ಸಾಧ್ಯವಿಲ್ಲ. ಅಂತೆಯೇ ಕೇಂದ್ರ ಸರ್ಕಾರದ ಸಾಮಾಜಿಕ ಕಲ್ಯಾಣ ಯೋಜನೆಗಳ ಪ್ರಯೋಜನ ಅಧಾರ್ ಕಾರ್ಡ್ ಬೇಕು ಎಂದೂ ಸ್ಪಷ್ಟಪಡಿಸಿದೆ.

ಇದೇ ವೇಳೆ ಕೇಂದ್ರ ಸರ್ಕಾರದ ಪರ ವಕೀಲರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೇಂದ್ರ ಸರ್ಕಾರ ಈಗಾಗಲೇ ಆಧಾರ್ ಕಾರ್ಡ್ ಪಡೆಯುವ ಅಂತಿಮ ಗಡುವನ್ನು ಜೂನ್ 30ರಿಂದ ಸೆಪ್ಟೆಂಬರ್ 30ಕ್ಕೆ  ವಿಸ್ತರಿಸಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.