ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ಸ್ಪರ್ಧಿಸುತ್ತೇನೆ: ಯುಪಿಎ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್
ಪ್ರಜಾಪ್ರಭುತ್ವ ಮೌಲ್ಯಗಳ ಆಧಾರದ ಮೇಲೆ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಯುಪಿಎ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಪ್ರಜಾಪ್ರಭುತ್ವ ಮೌಲ್ಯಗಳ ಆಧಾರದ ಮೇಲೆ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಯುಪಿಎ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಮಂಗಳವಾರ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಮೀರಾ ಕುಮಾರ್ ಅವರು, ಪ್ರಜಾಪ್ರಭುತ್ವ ಮೌಲ್ಯಗಳ ಆಧಾರದ ಮೇಲೆ ರಾಷ್ಟ್ರಪತಿ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತಿದ್ದು, ಗುಜರಾತ್ ನ ಸಬರಮತಿ ಆಶ್ರಮದಿಂದಲೇ ನನ್ನ ಪ್ರಚಾರ ಕಾರ್ಯವನ್ನು ಆರಂಭಿಸುತ್ತೇನೆ ಎಂದು ಹೇಳಿದರು. ಬಹುತೇಕ ಸಂಸದರು ನಾನು ಸ್ಪೀಕರ್ ಆಗಿದ್ದ ಸಂದರ್ಭದ ಕರ್ತವ್ಯ ಪರಿಪಾಲನೆಯನ್ನು ಮೆಚ್ಚಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಸದನದ ಎಲ್ಲ ಸದಸ್ಯರಿಗೂ ನಾನು ಪತ್ರ ಬರೆದಿದ್ದು, ಅವರ ಬೆಂಬಲ ಕೋರಿದ್ದೇನೆ ಎಂದು ಹೇಳಿದರು.
ಇನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೆ ಜೆಡಿಯು ಬೆಂಬಲ ನೀಡಿರುವ ಕುರಿತು ಮಾತನಾಡಿದ ಮೀರಾ ಕುಮಾರ್ ಅವರು, ರಾಜಕೀಯದಲ್ಲಿ ಇವೆಲ್ಲಾ ಸಾಮಾನ್ಯ. ಇಂದು ನಮ್ಮನ್ನು ಬೆಂಬಲಿಸಿದರುವು ನಾಳೆ ಮತ್ತೊಬ್ಬರನ್ನು ಬೆಂಬಲಿಸುತ್ತಾರೆ. ಈ ಬಗ್ಗೆ ಸೂಕ್ತ ಸಮಯದಲ್ಲಿ ನಾನು ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಸಾಮಾನ್ಯಸೈದ್ಧಾಂತಿಕ ನೆಲೆಗಟ್ಟಿನ ಮೇಲೆ ವಿಪಕ್ಷಗಳ ಒಗ್ಗಟ್ಟು ನಿಂತಿದೆ ಎಂದು ಹೇಳಿದರು. ಇನ್ನು ದೇಶದಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದಾಳಿ ಕುರಿತಂತೆ ಮಾತನಾಡಿದ ಅವರು, ದಲಿತರ ಮೇಲಿನ ದಾಳಿ ಹೀನ ಕೃತ್ಯ ಮತ್ತು ಅವಮಾನಕರ ಎಂದು ಬಣ್ಣಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


