2025ರ ವರೆಗೂ ಬಿಹಾರದಲ್ಲಿ ಮಹಾ ಮೈತ್ರಿ ಮುಂದುವರಿಯಲಿದೆ: ಜೆಡಿ(ಯು)
ರಾಷ್ಟ್ರಪತಿ ಚುನಾವಣೆ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಹೀಗಾಗಿ ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳದ ಜೊತೆ ಜೆಡಿ(ಯು) ...

Published On :
ನವದೆಹಲಿ: ರಾಷ್ಟ್ರಪತಿ ಚುನಾವಣೆ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಹೀಗಾಗಿ ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳದ ಜೊತೆ ಜೆಡಿ(ಯು) ಮಹಾಮೈತ್ರಿ 2025ರ ವರೆಗೆ ಮುಂದುವರಿಯುತ್ತದೆ ಎಂದು ಜೆಡಿಯು ಮುಖಂಡ ಕೆ.ಸಿ ತ್ಯಾಗಿ ಹೇಳಿದ್ದಾರೆ.
ಪಕ್ಷದೊಳಗೆ ಯಾವುದೇ ಒಳಜಗಳವಿಲ್ಲ, ಬಿಹಾರದಲ್ಲಿನ ನಮ್ಮ ಮೈತ್ರಿ ಪ್ರಬಲವಾಗಿದೆ. ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿ ಬೆಂಬಲಿಸುವ ಸಂಬಂಧ ಯಾವುದೇ ಭಿನ್ನಾಬಿಪ್ರಾಗಳಿಲ್ಲ, ಇದು ಮೈತ್ರಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಮೀರಾ ಕುಮಾರ್ ಅವರಿಗೆ ಬೆಂಬಲ ಸೂಚಿಸಿದ್ದಾರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್ ಡಿ ಎ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರಿಗೆ ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾರೆ.
ಬಿಹಾರ್ ಕಿ ಭೇಟಿ ಮೀರಾ ಕುಮಾರ್ ಮೀರಾ ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿಯಾಗಿದ್ದಾರೆ, ಆದರೆ ಅವರಿಗೆ ಸೋಲು ಖಚಿತ ಎಂಬ ರೀತಿಯಲ್ಲಿ ನಿತೀಶ್ ಕುಮಾರ್ ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


