ದೇಶ

ಏರ್‌ ಇಂಡಿಯಾ ಖಾಸಗೀಕರಣಕ್ಕೆ ಕೇಂದ್ರ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ: ಅರುಣ್ ಜೇಟ್ಲಿ

ಸಾಲದಲ್ಲಿ ಮುಳುಗಿರುವ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ....

ಏರ್‌ ಇಂಡಿಯಾ ಖಾಸಗೀಕರಣಕ್ಕೆ ಕೇಂದ್ರ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ: ಅರುಣ್ ಜೇಟ್ಲಿ
ಅರುಣ್ ಜೇಟ್ಲಿ
Published On :
ನವದೆಹಲಿ: ಸಾಲದಲ್ಲಿ ಮುಳುಗಿರುವ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದ್ದು, ಈ ಸಂಬಂಧ ಬುಧವಾರ ಏರ್‌ ಇಂಡಿಯಾ ಖಾಸಗೀಕರಣಕ್ಕೆ ಕೇಂದ್ರ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹಣಕಾಸು ಹಾಗೂ ರಕ್ಷಣಾ ಸಚಿವ ಅರುಣ್ ಜೇಟ್ಲಿ ಅವರು, ಏರ್‌ ಇಂಡಿಯಾ ಮೇಲಿನ ಹೂಡಿಕೆ ಹಿಂಪಡೆಯಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ ಎಂದು ಹೇಳಿದ್ದಾರೆ. 
ಹೂಡಿಕೆ ವಾಪಸ್ ಪಡೆಯಲು ಸಂಪುಟ ತಾತ್ವಿಕ ಒಪ್ಪಿಗೆ ನೀಡಿದ್ದು ಹಂತಹಂತವಾಗಿ ಹೂಡಿಕೆಯನ್ನು ಹಿಂಪಡೆಯಲಾಗುವುದು ಎಂದು ಜೇಟ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಏರ್‌ ಇಂಡಿಯಾ ಮೇಲಿನ ಹೂಡಿಕೆಯನ್ನು ಶೇ.100ರಷ್ಟು ಹಿಂಪಡೆಯುವ ಮೂಲಕ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆಯನ್ನು ಖಾಸಗೀಕರಣಗೊಳಿಸಲಾಗುತ್ತಿದೆ. 
ಅರುಣ್‌ ಜೇಟ್ಲಿ ಅವರು ಮೇ 29ರಂದೆ ಏರ್ ಇಂಡಿಯಾ ಖಾಸಗೀಕರಣೊಳಿಸುವ ಬಗ್ಗೆ ಸುಳಿವು ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.