ಚೆನ್ನೈ–ಬೆಂಗಳೂರು–ಮೈಸೂರು ಹೈಸ್ಪೀಡ್ ರೈಲು ಮಾರ್ಗದ ಬಗ್ಗೆ ಜರ್ಮನಿ ಅಧ್ಯಯನ
ಹೈಸ್ಪೀಡ್ ರೈಲು ಕ್ಷೇತ್ರದಲ್ಲಿ ಖ್ಯಾತಿ ಪಡೆದಿರುವ ಜರ್ಮನಿ ಈಗ ಚೆನ್ನೈ–ಬೆಂಗಳೂರು– ಮೈಸೂರು ಮಾರ್ಗದಲ್ಲಿ ಹೈ ಸ್ಪೀಡ್...

Published On :
ನವದೆಹಲಿ: ಹೈಸ್ಪೀಡ್ ರೈಲು ಕ್ಷೇತ್ರದಲ್ಲಿ ಖ್ಯಾತಿ ಪಡೆದಿರುವ ಜರ್ಮನಿ ಈಗ ಚೆನ್ನೈ–ಬೆಂಗಳೂರು– ಮೈಸೂರು ಮಾರ್ಗದಲ್ಲಿ ಹೈ ಸ್ಪೀಡ್ ರೈಲು ಓಡಿಸುವ ಸಾಧ್ಯತೆಯ ಬಗ್ಗೆ ಅಧ್ಯಯನ ನಡೆಸಲಿದೆ.
ದಕ್ಷಿಣ ಭಾಗದಲ್ಲಿ ಹೈಸ್ಪೀಡ್ ರೈಲು ಮಾರ್ಗದ ಬಗ್ಗೆ ಅಧ್ಯಯನ ನಡೆಸುವುದಕ್ಕಾಗಿ ಜರ್ಮನಿ ಡಿಬಿ, ಇ ಆಂಡ್ ಸಿ, ಇಂಟ್ರಾಪ್ಲಾನ್ ಕನ್ಸಲ್ಟ್ ಮತ್ತು ಇಂಜಿನೆಬ್ಯೂರೋ ವೊಸ್ಸಿಂಗ್ ಒಳಗೊಂಡ ತಜ್ಞರ ತಂಡ ರಚಿಸಿದೆ.
ಚೆನ್ನೈ–ಬೆಂಗಳೂರು– ಮೈಸೂರು ಮಾರ್ಗದಲ್ಲಿ ಅತಿವೇಗದ ರೈಲು ಓಡಿಸುವ ಸಾಧ್ಯತೆಯ ಬಗ್ಗೆ ಈ ತಂಡ ಸುಮಾರು ಒಂದು ವರ್ಷಗಳ ಕಾಲ ಅಧ್ಯಯನ ನಡೆಸಲಿದೆ. ಈ ಅಧ್ಯಯನದ ವೆಚ್ಚವನ್ನು ಜರ್ಮನಿಯೇ ಭರಿಸಲಿದೆ ಎದು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈಗಾಗಲೇ 2016ರಲ್ಲಿ ಜರ್ಮನಿ ಈ ಮಾರ್ಗದಲ್ಲಿ ಹೈಸ್ಪೀಡ್ ರೈಲು ಓಡಿಸುವ ಬಗ್ಗೆ ಪೂರ್ವ-ಸಾಧ್ಯತೆಯ ಅಧ್ಯಯನ ಪೂರ್ಣಗೊಳಿಸಿದ್ದು, ಈಗ ಸಾಧ್ಯತೆಯ ಬಗ್ಗೆ ಅಧ್ಯಯನ ನಡೆಸಲಿದೆ ಎಂದು ಅವರು ಹೇಳಿದ್ದಾರೆ.
ಇರುವ ಒಂದು ಮಾರ್ಗದಲ್ಲಿ ಗಂಟೆಗೆ 200 ಕಿ.ಮೀ. ವೇಗದಲ್ಲಿ ರೈಲು ಓಡಿಸುವ ಸಾಧ್ಯತೆಯ ಬಗ್ಗೆಯೂ ಜರ್ಮನಿ ತಂಡದ ಜತೆ ಚರ್ಚೆ ನಡೆಸಲಾಗಿದೆ’ ಎಂದು ಅವರು ಹೇಳಿದ್ದಾರೆ.
2016 ಏಪ್ರಿಲ್ ನಲ್ಲಿ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಜರ್ಮನಿಗೆ ಭೇಟಿ ನೀಡಿದ್ದ ವೇಳೆ ರೈಲ್ವೆ ವಲಯಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ಸಹಿ ಹಾಕಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅಧ್ಯಯನstudyGermanyಜರ್ಮನಿChennai-Bengaluru-Mysuru rail routeಚೆನ್ನೈ–ಬೆಂಗಳೂರು–ಮೈಸೂರು ಹೈಸ್ಪೀಡ್ ರೈಲು ಮಾರ್ಗ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


