ದೇಶ

ರಾಷ್ಟ್ರಪತಿ ಚುನಾವಣೆ: ಇಂದು ಮೀರಾ ಕುಮಾರ್ ನಾಮಪತ್ರ ಸಲ್ಲಿಕೆ

ಜು.17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಬುಧವಾರ ಕೊನೆಯ ದಿನವಾಗಿದ್ದು, ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ನಾಮಪತ್ರ ಸಲ್ಲಿಸಲಿದ್ದಾರೆ...

ರಾಷ್ಟ್ರಪತಿ ಚುನಾವಣೆ: ಇಂದು ಮೀರಾ ಕುಮಾರ್ ನಾಮಪತ್ರ ಸಲ್ಲಿಕೆ
ಮೀರಾ ಕುಮಾರ್
Published On :
ನವದೆಹಲಿ: ಜು.17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಬುಧವಾರ ಕೊನೆಯ ದಿನವಾಗಿದ್ದು, ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ನಾಮಪತ್ರ ಸಲ್ಲಿಸಲಿದ್ದಾರೆ. 
ಇಂದು ಬೆಳಿಗ್ಗೆ 11.30ರ ಸುಮಾರಿಗೆ ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಅವರ ಬಳಿ ಉಮೇದುವಾರಿಕೆ ಸಲ್ಲಿಸಲಿರುವ ಮೀರಾ ಕುಮಾರ್ ಅವರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಇ, ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಯೆಚೂರಿ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಸಾಥ್ ನೀಡಲಿದ್ದಾರೆ. 
ಇದೂವರೆಗೆ 24 ನಾಮಪತ್ರ ಸಲ್ಲಿಸಿದ್ದಾರೆ. ಆದರೆ, ಕೋವಿಂದ್ ಹೊರತುಪಡಿಸಿ ಉಳಿದವರ ನಾಮಪತ್ರಕ್ಕೆ ಸೂಚಕರೇ ಇಲ್ಲದ ಕಾರಣ ಎಲ್ಲವೂ ತಿರಸ್ಕೃತವಾಗಲಿವೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.