ದೇಶ

ಛತ್ತೀಸ್ಗಢದಲ್ಲಿ ಎನ್'ಕೌಂಟರ್: ಇಬ್ಬರು ನಕ್ಸಲರ ಹತ್ಯೆ

ಛತ್ತೀಸ್ಗಢದ ರಾಜ್ನಂದ್ಗಾಂವ್'ನಲ್ಲಿ ಭದ್ರತಾ ಪಡೆಗಳು ಎನ್ ಕೌಂಟರ್ ನಡೆಸಿದ್ದು, ಇಬ್ಬರು ನಕ್ಸಲರನ್ನು ಹತ್ಯೆ ಮಾಡಿರುವ ಘಟನೆ ಗುರುವಾರ ನಡೆದಿದೆ...

ಛತ್ತೀಸ್ಗಢದಲ್ಲಿ ಎನ್'ಕೌಂಟರ್: ಇಬ್ಬರು ನಕ್ಸಲರ ಹತ್ಯೆ
ಸಂಗ್ರಹ ಚಿತ್ರ
Published On :
ರಾಜ್ನಂದ್ಗಾಂವ್: ಛತ್ತೀಸ್ಗಢದ ರಾಜ್ನಂದ್ಗಾಂವ್'ನಲ್ಲಿ ಭದ್ರತಾ ಪಡೆಗಳು ಎನ್ ಕೌಂಟರ್ ನಡೆಸಿದ್ದು, ಇಬ್ಬರು ನಕ್ಸಲರನ್ನು ಹತ್ಯೆ ಮಾಡಿರುವ ಘಟನೆ ಗುರುವಾರ ನಡೆದಿದೆ. 
ಸುಕ್ತಾರಾ ಗ್ರಾಮದಲ್ಲಿರುವ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿ ಕುಳಿತಿದ್ದರು. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾರ್ಯಾಚರಣೆಗಿಳಿಯಲಾಗಿದ್ದು ಎಂದು ರಾಜ್ನಂದ್ಗಾಂವ್ ಪೊಲೀಸ್ ಅಧೀಕ್ಷಕ ಪ್ರಶಾಂತ್ ಅಗರ್ವಾಲ್ ಅವರು ಹೇಳಿದ್ದಾರೆ. 
ನಕ್ಸಲ ವಿರುದ್ದ ಜಿಲ್ಲಾ ಪೊಲೀಸ್ ಪಡೆ ಹಾಗೂ ವಿಶೇಷ ಕಾರ್ಯಾಚರಣೆ ಪಡೆಗಳು ಕಾರ್ಯಾಚರಣೆಗಿಳಿದಿತ್ತು. ಸುಕ್ತಾರ ಅರಣ್ಯ ಪ್ರದೇಶ ತಲುಪುತ್ತಿದ್ದಂತೆಯೇ ನಕ್ಸಲು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ನಡೆಸಲಾದ ಗುಂಡಿನ ಕಾಳಗದಲ್ಲಿ ಇಬ್ಬರು ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಸ್ಥಳದಲ್ಲಿ 315 ಬೋರ್ ಗನ್ ಮತ್ತು ಪಿಸ್ತೂಲ್ ಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆ. 
ಪ್ರಸ್ತುತ ಹತ್ಯೆಯಾಗಿರುವ ನಕ್ಸಲರ ಕುರಿತು ಯಾವುದ ಮಾಹಿತಿಗಳು ಲಭ್ಯವಾಗಿಲ್ಲ. ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.