ಬೈಕುಲಾ ಜೈಲು ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಿದ ಇಂದ್ರಾಣಿ ಮುಖರ್ಜಿ
ಬೈಕುಲಾ ಜೈಲು ಅಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ....

Published On :
ಮುಂಬೈ: ಬೈಕುಲಾ ಜೈಲು ಅಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಮಾಧ್ಯಮ ಉದ್ಯಮಿ ಇಂದ್ರಾಣಿ ಮುಖರ್ಜಿ ಅವರು ಗುರುವಾರ ಪೊಲೀಸರಿಗೆ ದೂರು ನೀಡಿದ್ದಾರೆ.
ಕಳೆದ ಶನಿವಾರ ಮುಂಬೈನ ಬೈಕುಲಾ ಜೈಲಿನಲ್ಲಿ ಮಹಿಳಾ ಜೈಲು ಅಧಿಕಾರಿಗಳ ಹಲ್ಲೆಯಿಂದಾಗಿ ಮಂಜುಳಾ ಶೆಟ್ಟಿ ಸಹ ಖೈದಿ ಮೃತಪಟ್ಟ ನಂತರ ಘಟನೆಗೆ ಸಾಕ್ಷಿಯಾಗಿದ್ದ ತನ್ನ ಮೇಲೆ ಜೈಲು ಸಿಬ್ಬಂದಿ ಹಲ್ಲೆ ನಡೆಸಿದ್ದಲ್ಲದೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಇಂದ್ರಾಣಿ ದೂರಿನಲ್ಲಿ ಆರೋಪಿಸಿದ್ದಾರೆ.
ನಿನ್ನೆಯಷ್ಟೆ ಸಿಬಿಐ ವಿಶೇಷ ಕೋರ್ಟ್ ಹಲ್ಲೆಗೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಿಲು 44 ವರ್ಷದ ಇಂದ್ರಾಣಿ ಮುಖರ್ಜಿಗೆ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದ್ರಾಣಿ ಮುಖರ್ಜಿ ಅವರು ಇಂದು ಮಧ್ಯಾಹ್ನ 12.30ರ ಸುಮಾರಿಗೆ ನಗ್ಪಾಡ ಪೊಲೀಸ್ ಠಾಣೆಗೆ ತೆರಳಿ ಜೈಲು ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿನ್ನೆ ಮಂಜುಳಾ ಸಾವಿನ ಕುರಿತು ಕೋರ್ಟ್ ನಲ್ಲಿ ಹೇಳಿಕೆ ನೀಡಿದ್ದ ಇಂದ್ರಾಣಿ ಮುಖರ್ಜಿ, ಜೈಲಿನ ಸಿಬ್ಬಂದಿ ಮಂಜುಳಾ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ನಾನು ಮತ್ತು ಇತರೆ ಖೈದಿಗಳು ಬಾಗಿಲಿನ ರಂಧ್ರದ ಮೂಲಕ ನೋಡಿದ್ದೇವೆ. ಆದರೆ ಇದನ್ನು ಕೋರ್ಟ್ ನಲ್ಲಿ ಹೇಳಿದರೆ ನೀವು ಅದೇ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಜೈಲು ಸಿಬ್ಬಂದಿ ಎಚ್ಚರಿಸಿರುವುದಾಗಿ ತಿಳಿಸಿದ್ದರು,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದೂರು ದಾಖಲುಇಂದ್ರಾಣಿ ಮುಖರ್ಜಿIndrani Mukerjeafiles complaintByculla jail officialsಬೈಕುಲಾ ಜೈಲು ಅಧಿಕಾರಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


