ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಬಯಲಿನಲ್ಲಿ ಮೂತ್ರ ವಿಸರ್ಜನೆ; 'ಸ್ವಚ್ಛ ಭಾರತ' ಕುರಿತು ವ್ಯಾಪಕ ಟೀಕೆ
ಬಯಲಿನಲ್ಲಿ ಮೂತ್ರ ವಿಸರ್ಜನೆ ಮಾಡುವ ಮೂಲಕ ಸ್ವಚ್ಛ ಭಾರತವನ್ನು ಸಾರ್ಥಕಗೊಳಿಸಿದ್ದು ಕೇಂದ್ರ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದ್ದಾರೆ

Published On :
ಬಿಹಾರ: ಭಾರತವನ್ನು ಸ್ವಚ್ಛವಾಗಿರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಯೋಜನೆಯ ಮೂಲಕ ಜನಜಾಗೃತಿ ಮೂಡಿಸುತ್ತಿರುವುದು ಒಂದೆಡೆಯಾದರೆ, ಅವರದ್ದೇ ಸಂಪುಟ ಸಹೋದ್ಯೋಗಿ ಬಯಲಿನಲ್ಲಿ ಮೂತ್ರ ವಿಸರ್ಜನೆ ಮಾಡುವ ಮೂಲಕ ಸ್ವಚ್ಛ ಭಾರತವನ್ನು ಸಾರ್ಥಕಗೊಳಿಸಿದ್ದು ಕೇಂದ್ರ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದ್ದಾರೆ.
ಎಲ್ಲಾ ರಾಜ್ಯಗಳು ಬಯಲು ಶೌಚ ಮುಕ್ತವಾಗಬೇಕೆಂದು ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದರೆ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಬಯಲಿನಲ್ಲಿ ಮೂತ್ರ ವಿಸರ್ಜನೆ ಮಾಡಿರುವ ದೃಶ್ಯ ವೈರಲ್ ಆಗಿದೆ. ರಾಧಾ ಮೋಹನ್ ಸಿಂಗ್ ಗೋಡೆ ಬದಿ ನಿಂತು ಮೂತ್ರ ವಿಸರ್ಜನೆ ಮಾಡುತ್ತಿರುವುದು ಹಾಗೂ ಅವರ ಬಳಿ ಭದ್ರತಾ ಸಿಬ್ಬಂದಿಗಳು ನಿಂತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಿಹಾರದ ಮೋತಿಹಾರಿಯಲ್ಲಿ ಈ ಘಟನೆ ನಡೆದಿದ್ದು, ಬಿಹಾರ ಸರ್ಕಾರ 2019 ರ ವೇಳೆಗೆ ರಾಜ್ಯವನ್ನು ಬಯಲು ಶೌಚ ಮುಕ್ತ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


