ಚಿಂತೆ ಬೇಡ... ಆಧಾರ್ ನಂಬರ್ ಜೋಡಣೆಯಾಗದ ಪ್ಯಾನ್ ಕಾರ್ಡ್ ಅಮಾನ್ಯವಾಗಲ್ಲ!
ಮಹತ್ವದ ಬೆಳವಣಿಗೆಯಲ್ಲಿ ಆಧಾರ್ ನಂಬರ್ ಜೋಡಣೆಯಾಗದ ಪ್ಯಾನ್ ಕಾರ್ಡ್ ಗಳನ್ನು ಅಮಾನ್ಯಗೊಳಿಸುವುದಿಲ್ಲ ಎಂದು ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಆಧಾರ್ ನಂಬರ್ ಜೋಡಣೆಯಾಗದ ಪ್ಯಾನ್ ಕಾರ್ಡ್ ಗಳನ್ನು ಅಮಾನ್ಯಗೊಳಿಸುವುದಿಲ್ಲ ಎಂದು ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ.
ಆಂಗ್ಲ ಮಾಧ್ಯಮವೊಂದು ವರದಿ ಮಾಡಿರುವಂತೆ, ಪ್ಯಾನ್ ಕಾರ್ಡ್ ಗೆ ಆಧಾರ್ ನಂಬರ್ ಜೋಡಣೆ ಮಾಡಲು ಕೇಂದ್ರ ಸರ್ಕಾರ ಜುಲೈ 1 ರ ಗಡುವು ನೀಡಿತ್ತು. ಆದರೆ ತಾಂತ್ರಿಕ ಕಾರಣವೂ ಸೇರಿದಂತೆ ಇತರೆ ಕಾರಣಗಳಿಂದಾಗಿ ಬಹುತೇಕ ಪ್ಯಾನ್ ಕಾರ್ಡ್ ಹೊಂದಿರುವವರು ಆಧಾರ್ ನಂಬರ್ ಜೋಡಣೆ ಮಾಡಲು ಸಾಧ್ಯವಾಗಿಲ್ಲ, ಹೀಗಾಗಿ ಕೇಂದ್ರ ತೆರಿಗೆ ಇಲಾಖೆ ಈ ನಿರ್ಧಾರಕ್ಕೆ ಬಂದಿದ್ದು, ಆಧಾರ್ ನಂಬರ್ ಜೋಡಣೆಯಾಗದ ಪ್ಯಾನ್ ಕಾರ್ಡ್ಗಳನ್ನು ಅಮಾನ್ಯಗೊಳಿಸುವುದಿಲ್ಲ ಎಂದು ತಿಳಿಸಿದೆ.
ಇದಾಗ್ಯೂ ಪ್ಯಾನ್ ಕಾರ್ಡ್ ಗೆ ಆಧಾರ್ ನಂಬರ್ ಕಡ್ಡಾಯಗೊಳಿಸುವ ನಿರ್ಧಾರವನ್ನು ಮರು ಪರಿಶೀಲಿಸುವು ಕುರಿತಂತೆ ಕೇಂದ್ರ ಸರ್ಕಾರ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಇನ್ನು ತೆರಿಗೆ ಪಾವತಿ ಅರ್ಜಿಯಲ್ಲಿ ತೆರಿಗೆ ಪಾವತಿ ವೇಳೆ ತೆರಿಗೆ ಪಾವತಿದಾರರು ಆಧಾರ್ ನಂಬರ್ ಮತ್ತು ಪ್ಯಾನ್ ನಂಬರ್ ಗಳನ್ನು ನಮೂದಿಸಲು ಅವಕಾಶ ನೀಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು, ಆಧಾರ್ ನಂಬರ್ ಜೋಡಣೆಯಾಗದ ಪ್ಯಾನ್ ಕಾರ್ಡ್ ಗಳನ್ನು ಅಮಾನ್ಯಗೊಳಿಸುವುದಿಲ್ಲವಾದರೂ, ತೆರಿಗೆ ಪಾವತಿ ಅಥವಾ ಇ-ತೆರಿಗೆ ಪಾವತಿ ವೇಳೆ ಆಧಾರ್ ನಂಬರ್ ಅಥವಾ ಅದರ ಎನ್ ರಾಲ್ ಮೆಂಟ್ ನಂಬರ್ ಮತ್ತು ಪ್ಯಾನ್ ನಂಬರ್ ನಮೂದಿಸುವುದು ಕಡ್ಡಾಯವಾಗಿರುತ್ತದೆ. ಅಂತೆಯೇ ವಾರ್ಷಿಕ ವರಮಾನ 5 ಲಕ್ಷಕ್ಕಿಂತ ಹೆಚ್ಚಿರುವ ವ್ಯಕ್ತಿಗಳು ಕಡ್ಡಾಯವಾಗಿ ಇ-ತೆರಿಗೆ ಪಾವತಿಸುವುದು ಕಡ್ಡಾಯವಾಗಿರುತ್ತದೆ. 80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಈ ನಿಯಮದಿಂದ ಹೊರತಾಗಿರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ಜುಲೈ 1ರಿಂದ ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಆಧಾರ್ ನಂಬರ್ ಸಲ್ಲಿಕೆ ಮಾಡುವುದು ಕಡ್ಡಾಯವಾಗಿದ್ದು, ಆಧಾರ್ ಕಾರ್ಡ್ ಇಲ್ಲದ ಹೊರತು ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವಂತಿಲ್ಲ ಎಂದೂ ಇಲಾಖೆಯ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


