ಸೇನೆ ವಿರುದ್ಧ ಅಪಮಾನಕರ ಹೇಳಿಕೆ: ಅಜಂಖಾನ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.

ಪಾಟ್ನಾ: ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.
ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ ಸಂಘಟನೆಗಳು ನೀಡಿದ ದೂರಿನ ಅನ್ವಯ ಉತ್ತರಪ್ರದೇಶದ ಬಿಜ್‌ನೋರ್‌ನ ಚಾಂದ್‌ಪುರ ಪೊಲೀಸ್ ಠಾಣೆಯಲ್ಲಿ ದೇಶದ್ರೋಹದ ಪ್ರಕರಣದ ದಾಖಲಿಸಲಾಗಿದೆ. ಅಜಂಖಾನ್ ವಿರುದ್ಧ ಐಪಿಸಿ ಸೆಕ್ಷನ್ 124 (ದೇಶದ್ರೋಹ), 131 (ಯೋಧರನ್ನು ನಿಂದಿಸುವುದು ಹಾಗೂ ಅವರ ಕರ್ತವ್ಯಕ್ಕೆ ಆಕ್ಷೇಪ ವ್ಯಕ್ತಪಡಿಸುವುದು) ಮತ್ತು 505 (ಸಾರ್ವಜನಿಕವಾಗಿ ಅವಹೇಳನಕ್ಕೆ ಗುರಿಯಾಗುವಂಥ ಹೇಳಿಕೆ ನೀಡುವುದು) ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಚಾಂದ್‌ಪುರ ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ಅಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಇತ್ತೀಚೆಗೆ ರಾಮ್‌ಪುರದಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಅಜಂ ಖಾನ್, ‘ಕೆಲವು ಪ್ರದೇಶಗಳಲ್ಲಿ ಮಹಿಳೆಯರು ಯೋಧರ ಮರ್ಮಾಂಗ ಕತ್ತರಿಸುತ್ತಿದ್ದಾರೆ. ಕಾಶ್ಮೀರ, ತ್ರಿಪುರಾ, ಜಾರ್ಖಂಡ್, ಬಂಗಾಳ ಮತ್ತಿತರ ಕಡೆಗಳಲ್ಲಿ ಅವಮಾನಕರ ಹಿಂಸೆ ನಡೆಯುತ್ತಿದೆ. ಯಾವುದರಿಂದ ಮಹಿಳೆಯರಿಗೆ ತೊಂದರೆ ಆಗುತ್ತಿದೆಯೋ ಅದನ್ನು ಅವರು ಕತ್ತರಿಸುತ್ತಿದ್ದಾರೆ. ಭಾರತಕ್ಕೆ ನಾಚಿಕೆಯಾಗಬೇಕು. ವಿಶ್ವವನ್ನು ಭಾರತ ಯಾವ ಮುಖದಿಂದ ನೋಡುತ್ತದೆ ಎಂದು ಆರೋಪಿಸುವ ಮೂಲಕ ಯೋಧರು ಅತ್ಯಾಚಾರಿಗಳು ಎಂದು ದೂಷಿಸಿದ್ದರು.
ಅಜಂ ಖಾನ್ ಹೇಳಿಕೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂಬಂಧ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳಗಳು ಕೂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಪ್ರತಿಭಟನೆಯನ್ನೂ ನಡೆಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


