ದೇಶ

ಸರ್ಜಿಕಲ್ ಸ್ಟ್ರೈಕ್ ನಿಂದ ಉರಿ ದಾಳಿ ಉಗ್ರರಿಗೆ ಏನೂ ಆಗಲಿಲ್ಲ: ಒಮರ್ ಅಬ್ದುಲ್ಲಾ

2016 ರಲ್ಲಿ ನಡೆದ ಉರಿ ಉಗ್ರ ದಾಳಿಕೋರರ ಮೇಲೆ ಸರ್ಜಿಕಲ್ ಸ್ಟ್ರೈಕ್ ಯಾವುದೇ ಪರಿಣಾಮ ಬೀರಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ...

ಸರ್ಜಿಕಲ್ ಸ್ಟ್ರೈಕ್ ನಿಂದ ಉರಿ ದಾಳಿ ಉಗ್ರರಿಗೆ ಏನೂ ಆಗಲಿಲ್ಲ: ಒಮರ್ ಅಬ್ದುಲ್ಲಾ
ಒಮರ್ ಅಬ್ದುಲ್ಲಾ
Published On :
ಶ್ರೀನಗರ: 2016 ರಲ್ಲಿ ನಡೆದ ಉರಿ ಉಗ್ರ ದಾಳಿಕೋರರ ಮೇಲೆ ಸರ್ಜಿಕಲ್ ಸ್ಟ್ರೈಕ್ ಯಾವುದೇ ಪರಿಣಾಮ ಬೀರಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
ಸಚಿವರಿಗೆ ಅವಮಾನಕರವಾದ ಪ್ರಶ್ನೆ ಕೇಳಿದ ಹಿನ್ನೆಲೆಯಲ್ಲಿ  ಕಳೆದ ವರ್ಷ ಸರ್ಜಿಕಲ್ ಸ್ಟ್ರೈಕ್ ನಡೆಸಲಾಯಿತು ಎಂದು ಜಮ್ಮು ಕಾಶ್ಮೀರದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.
ಟಿವಿ ನಿರೂಪಕಿಯೊಬ್ಬರ ಪ್ರಶ್ನೆ ಪಾಕಿಸ್ತಾನದ ಜೊತೆಗಿನ ಘರ್ಷಣೆಗೆ ಪ್ರಚೋದನೆ ನೀಡಿತು. ನಾವು ಸುರಕ್ಷಿತವಾಗಿದ್ದೇವೆ ಎಂಬ ಭಾವನೆ ಮೂಡಿಸಲು ಸರ್ಜಿಕಲ್ ಸ್ಟ್ರೈಕ್ ನಡೆಸುವ ನಿರ್ಧಾರ ಕೈಗೊಳ್ಳಲಾಯಿತು ಎಂದು ಹೇಳಿದ್ದಾರೆ.
ಸೆಪ್ಟಂಬರ್ 28 ಮತ್ತು 29 ರ ರಾತ್ರಿಯಂದು ಗಡಿ ನಿಯಂತ್ರಣ ಭಾಗದಲ್ಲಿನ 7 ಉಗ್ರರ ಶಿಬಿರಗಳ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಲಾಯಿತು. ಇದಾದ ಕೆಲ ದಿನಗಳಲ್ಲಿ ಉರಿ ದಾಳಿ ಉಗ್ರರಿಗೆ ಶಿಕ್ಷಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.
ಉರಿ ಸೇನಾ ನೆಲೆಯ ಮೇಲೆ ಜೈಶ್ -ಇ -ಮೊಹಮದ್ ಉಗ್ರ ಸಂಘಟನೆ ದಾಳಿ ನಡೆಸಿದ 11 ದಿನಗಳ ನಂತರ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿತ್ತು. ಈ ದಾಳಿಯಲ್ಲಿ 18 ಮಂದಿ ಸಾನಿಕರು ಹುತಾತ್ಮರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.