ದೇಶ

ರಾಹುಲ್ ಗಾಂಧಿ ಇಟಲಿಯಲ್ಲಿ ಕುಳಿತು ಮೋದಿ ಸರ್ಕಾರವನ್ನು ಟೀಕಿಸುತ್ತಾರೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಗೇಲಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಇಟಲಿಯಲ್ಲಿ ಕುಳಿತುಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ....

ರಾಹುಲ್ ಗಾಂಧಿ ಇಟಲಿಯಲ್ಲಿ ಕುಳಿತು ಮೋದಿ ಸರ್ಕಾರವನ್ನು ಟೀಕಿಸುತ್ತಾರೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಗೇಲಿ
ಧರ್ಮೇಂದ್ರ ಪ್ರಧಾನ್
Published On :
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಇಟಲಿಯಲ್ಲಿ ಕುಳಿತುಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಭಿವೃದ್ಧಿಯನ್ನು ದೂಷಿಸುತ್ತಿದ್ದಾರೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್ ಗೇಲಿ ಮಾಡಿದ್ದಾರೆ.
ಪೈಪ್ಲೈನ್ಡ್ ನ್ಯಾಚುರಲ್ ಗ್ಯಾಸ್ (PNG) ನೆಟ್ವರ್ಕ್ ಸಮಾರಂಭದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿ, ತಮ್ಮ ಅಜ್ಜಿಯನ್ನು ಕಾಣಲು ರಾಹುಲ್ ಗಾಂಧಿಯವರು ಇಟಲಿಗೆ ಹೋಗಿದ್ದಾರೆ. ಅಲ್ಲಿ ಕೂಡ ಅವರು ಬಿಡುವುದಿಲ್ಲ. ನರೇಂದ್ರ ಮೋದಿ ಸರ್ಕಾರ ಇದುವರೆಗೆ ಮಾಡಿದ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಟೀಕಿಸುತ್ತಾರೆ ಎಂದು ಭಾವಿಸುತ್ತೇನೆ ಎಂದು ಹೇಳಿದರು.
ದೇಶಾದ್ಯಂತ ಬಿಜೆಪಿ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳನ್ನು ಶ್ಲಾಘಿಸಿದ ಸಚಿವರು, ಕಳೆದ ಮೂರು ವ ರ್ಷಗಳಲ್ಲಿ ಇಂದ್ರಪ್ರಸ್ಥ ಅನಿಲವನ್ನು ದೆಹಲಿಯ ಬಿ.ಕೆ.ದತ್ತ ಕೊಲೊನಿಯ ಜನರಿಗೆ 1,30,000 ಹೊಸ ಸಂಪರ್ಕಗಳನ್ನು ನೀಡಲಾಗಿದೆ. ಕೊಳವೆ ಮೂಲಕ ಪೂರೈಸುವ ನೈಸರ್ಗಿಕ ಅನಿಲ ಅಗ್ಗವಾಗಿದ್ದು ಬಳಕೆಗೂ ಸುರಕ್ಷಿತವಾಗಿದೆ. ದೆಹಲಿಯ ಸ್ಥಳೀಯ ಜನರಿಗೆ ಇದು ಸಹಾಯವಾಗಿದೆ ಎಂದು ಪ್ರಧಾನ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.