ಕೇರಳ ಬಜೆಟ್ ಸೋರಿಕೆ ಆರೋಪ, ವಿತ್ತ ಸಚಿವರ ರಾಜಿನಾಮೆಗೆ ಪ್ರತಿಪಕ್ಷಗಳ ಆಗ್ರಹ
ಕೇರಳ ಹಣಕಾಸು ಸಚಿವ ಟಿಎಂ ಥಾಮಸ್ ಐಸಾಕ್ ಅವರು ಶುಕ್ರವಾರ 68ನೇ ರಾಜ್ಯ ಬಜೆಟ್ ಅನ್ನು ಮಂಡಿಸುತ್ತಿದ್ದು, ಪಿಣರಾಯ್ ವಿಜಯನ್...

Published On :
ಕೊಚ್ಚಿ: ಕೇರಳ ಹಣಕಾಸು ಸಚಿವ ಟಿಎಂ ಥಾಮಸ್ ಐಸಾಕ್ ಅವರು ಶುಕ್ರವಾರ 68ನೇ ರಾಜ್ಯ ಬಜೆಟ್ ಅನ್ನು ಮಂಡಿಸುತ್ತಿದ್ದು, ಪಿಣರಾಯ್ ವಿಜಯನ್ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ.
ಈ ಮಧ್ಯೆ ರಾಜ್ಯಾದ್ಯಂತ ಇಂಟರ್ ನೆಟ್ ಸಂಪರ್ಕ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ, ನಿರಾಶ್ರಿತರಿಗೆ ಮನೆ ಹಾಗೂ ವಿಕಲಚೇತನರಿಗೆ ಮೀಸಲಾತಿ ಸೇರಿದಂತೆ ಬಜೆಟ್ ನ ಕೆಲವು ಪ್ರಮುಖ ಸಾಮಾಜಿಕ ತಾಣದಲ್ಲಿ ಸೋರಿಕೆಯಾಗಿವೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.
ಇಂದು ಬೆಳಗ್ಗೆ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳು ಸೋರಿಕೆ ವಿಚಾರ ಮುಂದಿಟ್ಟುಕೊಂಡು ಕಲಾಪಕ್ಕೆ ಅಡ್ಡಿಪಡಿಸಿದರು. ಹಣಕಾಸು ಸಚಿವರು ಬಜೆಟ್ ಮಂಡಿಸುತ್ತಿದ್ದ ವೇಳೆಯೇ ಪ್ರತಿಪಕ್ಷಗಳ ಕೆಲ ಸದಸ್ಯರು ಸದನದ ಬಾವಿಗೆ ನುಗ್ಗಿ ಪ್ರತಿಭಟನೆ ನಡೆಸಿದರು.
ಥಾಮಸ್ ಐಸಾಕ್ ಅವರು ಬಜೆಟ್ ಮಂಡಿಸುವ ಮುನ್ನವೇ ಬಜೆಟ್ ಕೆಲ ಪ್ರಮುಖ ಅಂಶಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಬಜೆಟ್ ಮೌಲ್ಯ ಕಳೆದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿಥಾಲ ಅವರು ಆರೋಪಿಸಿದ್ದಾರೆ.
Read more news in Malayalam on Samakalika Malayalam
Read more news in Malayalam on Samakalika Malayalam
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


