ಕೇರಳ ಸಿಎಂ ತಲೆಗೆ ರೂ.1 ಕೋಟಿ ಇನಾಮು ಹೇಳಿಕೆ: ಚಂದ್ರಾವತ್ ವಿರುದ್ಧ ಎಫ್ಐಆರ್
ಕೇರಳ ರಾಜ್ಯ ಮುಖ್ಯಮಂತ್ರಿ ತಲೆ ಕಡಿದವರಿಗೆ ರೂ.1 ಕೋಟಿ ಬಹುಮಾನ ನೀಡುವುದಾಗಿ ಹೇಳಿಕೆ ನೀಡಿದ್ದ ಆರ್'ಎಸ್ಎಸ್ ನಾಯಕ ಕುಂದನ್ ಚಂದ್ರಾವತ್ ವಿರುದ್ಧ ಎಫ್ಐಆರ್ ದಾಖಲಾಗಿರುವುದಾಗಿ...

Published On :
ಇಂದೋರ್: ಕೇರಳ ರಾಜ್ಯ ಮುಖ್ಯಮಂತ್ರಿ ತಲೆ ಕಡಿದವರಿಗೆ ರೂ.1 ಕೋಟಿ ಬಹುಮಾನ ನೀಡುವುದಾಗಿ ಹೇಳಿಕೆ ನೀಡಿದ್ದ ಆರ್'ಎಸ್ಎಸ್ ನಾಯಕ ಕುಂದನ್ ಚಂದ್ರಾವತ್ ವಿರುದ್ಧ ಎಫ್ಐಆರ್ ದಾಖಲಾಗಿರುವುದಾಗಿ ಶನಿವಾರ ತಿಳಿದುಬಂದಿದೆ.
ಉಜ್ಜಯಿನಿಯ ಶಹೀದ್ ಪಾರ್ಕ್'ನಲ್ಲಿ ಅರ್'ಎಸ್ಎಸ್ ಹಮ್ಮಿಕೊಂಡಿದ್ದ ಸಭೆಯೊಂದರಲ್ಲಿ ಭಾಗವಹಿಸಿದ್ದ ಮಧ್ಯಪ್ರದೇಶದ ಸ್ಥಳೀಯ ಆರ್'ಎಸ್ಎಸ್ ನಾಯಕ ಕುಂದನ್ ಚಂದ್ರಾವತ್ ಅವರು, ಹಿಂದೂಪರ ಸಂಘಟನೆಗಳ ಪ್ರತಿ ರೋಧದ ನಡುವೆಯೂ ಸಿಪಿಎಂ ಮಂಗಳೂರಿನಲ್ಲಿ ಆಯೋಜಿಸಿದ್ದ ಸೌಹಾರ್ದ ರ್ಯಾಲಿಯಲ್ಲಿ ಭಾಗಿಯಾಗಿದ್ದ ಹಿರಿಯ ಎಡಪಂಥೀಯ ನಾಯಕ ಮತ್ತು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಲೆ ಕಡಿದವರಿಗೆ ರೂ.1 ಕೋಟಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದರು.
ಈ ಹೇಳಿಕೆಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿತ್ತು. ಹೇಳಿಕೆ ಸಂಬಂಧ ಕುಂದನ್ ಚಂದ್ರಾವತ್ ಅವರನ್ನು ಉಜ್ಜಯಿನಿ ಮಹಾನಾಗರ ಸಹ-ಪ್ರಚಾರಕ ಸ್ಥಾನದಿಂದ ಆರ್'ಎಸ್ಎಸ್ ತೆಗೆದುಹಾಕಿತ್ತು. ಇದರ ಬೆನ್ನಲ್ಲೇ ಇದೀಗ ಚಂದ್ರಾವತ್ ವಿರುದ್ಧ ಮಾದವ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಚಂದ್ರಾವತ್ ಅವರ ವಿರುದ್ಧ ಐಪಿಸಿ ಸೆಕ್ಷನ್ 5051 (ಬಿ) ಅಡಿಯಲ್ಲಿ (ಭಯ, ಸಾರ್ವಜನಿಕರಿಗೆ ಎಚ್ಚರಿಕೆ, ರಾಜ್ಯದ ವಿರುದ್ದ ಅಪರಾಧ, ಸಾರ್ವಜನಿಕರ ಪ್ರಶಾಂತತೆಗೆ ಧಕ್ಕೆ) ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


