ಉ.ಪ್ರದೇಶದಲ್ಲಿ ಸ್ಪಷ್ಟ ಬಹುಮತದ ಮೂಲಕ ಸರ್ಕಾರ ರಚಿಸುತ್ತೇವೆ: ರಾಜನಾಥ್ ಸಿಂಗ್
ಪ್ರಸ್ತುತ ಉತ್ತರ ಪ್ರದೇಶದಲ್ಲಿ ಬಿಜೆಪಿ ಪರ ಅಲೆಇದ್ದು, ಈ ಭಾರಿ ಖಂಡಿತ ಬಿಜೆಪಿ ಅಧಿಕಾರದ ಗದ್ದುಗೇ ಏರಲಿದೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಾರಣಾಸಿ: ಪ್ರಸ್ತುತ ಉತ್ತರ ಪ್ರದೇಶದಲ್ಲಿ ಬಿಜೆಪಿ ಪರ ಅಲೆಇದ್ದು, ಈ ಭಾರಿ ಖಂಡಿತ ಬಿಜೆಪಿ ಅಧಿಕಾರದ ಗದ್ದುಗೇ ಏರಲಿದೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶ ಚುನಾವಣೆಯ ಅಂತಿಮ ಹಂತದ ಮತದಾನದ ನಿಮಿತ್ತ ವಾರಣಾಸಿಯಲ್ಲಿ ಪ್ರಚಾರ ನಡೆಸುತ್ತಿರುವ ರಾಜನಾಥ್ ಸಿಂಗ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಉತ್ತರ ಪ್ರದೇಶದಲ್ಲಿ ಆಢಳಿತ ವಿರೋಧಿ ಅಲೆ ಇದ್ದು, ಬಿಜೆಪಿ ಪರ ಜನರಿದ್ದಾರೆ. ಕೇವಲ ನಾವಷ್ಟೇ ಅಲ್ಲ.. ರಾಜಕೀಯ ತಜ್ಞರೂ ಕೂಡ ಉತ್ತರಪ್ರದೇಶದಲ್ಲಿ ಬಿಜೆಪಿ ಸ್ಪಷ್ಟ ಬಹುಮತದ ಮೂಲಕ ಸರ್ಕಾರ ರಚಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಉತ್ತರ ಪ್ರದೇಶದ ಪೂರ್ವ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಜನ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು, ದೇಶಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾಡುತ್ತಿರುವ ಕೆಲಸ ಬಿಜೆಪಿಗೆ ಪ್ರತಿಫಲವನ್ನು ನೀಡುತ್ತಿದೆ. ಮೋದಿಯವರ ಉತ್ತಮ ಕೆಲಸದಿಂದ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬೆಂಬಲ ಸಿಗುತ್ತಿವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


