ಮೋದಿ ಸ್ವಕ್ಷೇತ್ರದಲ್ಲಿ ಎಸ್'ಪಿ-ಕಾಂಗ್ರೆಸ್ ರೋಡ್'ಶೋ: ಸಮಯ ವ್ಯರ್ಥ ಎಂದ ಬಿಜೆಪಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಕ್ಷೇತ್ರ ವಾರಣಾಸಿಯಲ್ಲಿ ಕಾಂಗ್ರೆಸ್-ಸಮಾಜವಾದಿ ಪಕ್ಷಗಳು ರೋಡ್ ಮಾಡುವ ಮೂಲಕ ಸಮಯ ವ್ಯರ್ಥ ಮಾಡುತ್ತಿದೆ ಎಂದು ಬಿಜೆಪಿ ಭಾನುವಾರ ಹೇಳಿದೆ...

Published On :
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಕ್ಷೇತ್ರ ವಾರಣಾಸಿಯಲ್ಲಿ ಕಾಂಗ್ರೆಸ್-ಸಮಾಜವಾದಿ ಪಕ್ಷಗಳು ರೋಡ್ ಮಾಡುವ ಮೂಲಕ ಸಮಯ ವ್ಯರ್ಥ ಮಾಡುತ್ತಿದೆ ಎಂದು ಬಿಜೆಪಿ ಭಾನುವಾರ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಎಸ್. ಪ್ರಕಾಶ್ ಅವರು, ವಾರಣಾಸಿ ಕ್ಷೇತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರತಿನಿಧಿಸುತ್ತಿದ್ದಾರೆ. ಮೋದಿಯವರ ಸ್ವಕ್ಷೇತ್ರದಲ್ಲಿಯೇ ಅವರ ವಿರುದ್ಧ ಪ್ರಚಾರ ಮಾಡಿದರೆ. ಅದು ರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮ ಬೀರುತ್ತದೆ ಎಂದು ಇತರೆ ರಾಜಕೀಯ ಪಕ್ಷಗಳು ಆಲೋಚಿಸುತ್ತಿವೆ. ಆದರೆಸ ನಮ್ಮ ಮೋದಿ ಅರ್ಜುನ ಇದ್ದಂತೆ ಎಂದು ಹೇಳಿದ್ದಾರೆ.
ಮಾಯಾವತಿ, ಅಖಿಲೇಶ್ ಯಾದವ್, ಡಿಂಪಲ್ ಯಾದವ್, ರಾಹುಲ್ ಗಾಂಧಿಯವರ ಪ್ರಚಾರಗಳು ವ್ಯರ್ಥವಷ್ಟೇ ಪ್ರಧಾನಮಂತ್ರಿಗಳ ಉತ್ತಮ ಕೆಲಸ ಬಿಜೆಪಿ ಪಕ್ಷಕ್ಕೆ ಶ್ರೀಮಂತ ಲಾಭಾಂಶ ನೀಡಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


