ಸಿಪಿಐ(ಎಂ)ಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ: ನಖ್ವಿ
ಕೇರಳದಲ್ಲಿ ನಡೆಯುತ್ತಿರುವ ಘರ್ಷಣೆ ಹಾಗೂ ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಿಪಿಐ(ಎಂ) ಪಕ್ಷದ ವಿರುದ್ಧ ಕೇಂದ್ರ ಸಂಸದೀಯ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಕಿಡಿಕಾರಿದ್ದು, ಕಮ್ಯುನಿಸ್ಟ್ ಪಕ್ಷಕ್ಕೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ...

Published On :
ನವದೆಹಲಿ: ಕೇರಳದಲ್ಲಿ ನಡೆಯುತ್ತಿರುವ ಘರ್ಷಣೆ ಹಾಗೂ ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಿಪಿಐ(ಎಂ) ಪಕ್ಷದ ವಿರುದ್ಧ ಕೇಂದ್ರ ಸಂಸದೀಯ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಕಿಡಿಕಾರಿದ್ದು, ಕಮ್ಯುನಿಸ್ಟ್ ಪಕ್ಷಕ್ಕೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ ಎಂದು ಭಾನುವಾರ ಹೇಳಿದ್ದಾರೆ.
ಕೇರಳದಲ್ಲಿ ಇಂದು ಬೆಳಿಗ್ಗೆ ನಡೆದ ಸಿಪಿಐ(ಎಂ) ಮತ್ತು ಆರ್'ಎಸ್ಎಸ್ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಕೇರಳದಲ್ಲಿ ಘರ್ಷಣೆ ಸೃಷ್ಟಿಸುತ್ತಿರುವವರು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿಲ್ಲ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕಿದೆ. ಅಂತಹ ಜನರಿಗೆ ಭಾರತದ ಸಂವಿಧಾನದ ಮೇಲೆಯೂ ನಂಬಿಕೆಯಿಟ್ಟಿಲ್ಲ. ಸಿಪಿಐ(ಎಂ) ಪಕ್ಷ ತನ್ನ ಮಾನಸಿಕ ಸೀಮಿತವನ್ನು ಕಳೆದುಕೊಂಡಿದೆ. ಹೀಗಾಗಿಯೇ ಪಕ್ಷ ಗೂಂಡಾ ಪಕ್ಷವಾಗಿ ಪರಿವರ್ತನೆಗೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಸಿಪಿಐ(ಎಂ)ಗೆ ಸಲಹೆ ನೀಡಿರುವ ನಖ್ವಿ ಅವರು, ಸಿಪಿಐ(ಎಂ) ಪಕ್ಷ ತನ್ನ ಸೈದ್ಧಾಂತಿಕವಾಗಿ ಹಿಂಸಾಚಾರಗಳನ್ನು ಸೃಷ್ಟಿಸಬಾರದು ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕಮ್ಯುನಿಸ್ಟ್ ಪಕ್ಷಗಳ ಕಾರ್ಯಕರ್ತರು ಇಂದು ಬೆಳಿಗ್ಗೆ ಹಲ್ಲೆ ನಡೆಸಿದ್ದರು. ಘರ್ಷಣೆಯಲ್ಲಿ ಮೂವರು ಆರ್'ಎಸ್ಎಸ್ ಕಾರ್ಯಕರ್ತರು ಹಾಗೂ ಓರ್ವ ಬಿಜೆಪಿ ಕಾರ್ಯಕರ್ತನಿಗೆ ಗಂಭೀರವಾದ ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


