ಉ.ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪತಿಯನ್ನು ಬಂಧನಕ್ಕೊಳಪಡಿಸುತ್ತೇವೆ: ಕಲ್ರಾಜ್ ಮಿಶ್ರಾ
ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಅತ್ಯಾಚಾರ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸುತ್ತೇವೆಂದು...

Published On :
ನವದೆಹಲಿ: ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಅತ್ಯಾಚಾರ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸುತ್ತೇವೆಂದು ಕೇಂದ್ರ ಸಚಿವ ಕಲ್ರಾಜ್ ಮಿಶ್ರಾ ಅವರು ಭಾನುವಾರ ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಗಾಯತ್ರಿ ಪ್ರಜಾಪತಿಯವರ ಹೆಸರು ಕೇಳಿಬಂದಿದ್ದರೂ. ಈ ವರೆಗೂ ರಾಜ್ಯ ಸರ್ಕಾರ ಅವರನ್ನು ಬಂಧನಕ್ಕೊಳಪಡಿಸಿಲ್ಲ. ಮಾರ್ಚ್ 11 ರ ಬಳಿಕ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ಆದರೆ, ನಾವು ಪ್ರಜಾಪತಿಯನ್ನು ಬಂಧನಕ್ಕೊಳಪಡಿಸುತ್ತೇವೆಂದು ಹೇಳಿದ್ದಾರೆ.
ಪ್ರಜಾಪತಿಯವರನ್ನು ಅಖಿಲೇಶ್ ನೇತೃತ್ವದ ಸರ್ಕಾರ ರಕ್ಷಣೆ ಮಾಡುತ್ತಿದೆ. ಹೀಗಾಗಿಯೇ ಅವರನ್ನು ಈ ವರೆಗೂ ಬಂಧನಕ್ಕೊಳಪಡಿಸಿಲ್ಲ ಎಂದು ಆರೋಪಿಸಿದ್ದಾರೆ.
2014ರಲ್ಲಿ ಲಖನೌದಲ್ಲಿರುವ ತಮ್ಮ ನಿವಾಸಕ್ಕೆ ಮಹಿಳೆಯೊಬ್ಬರನ್ನು ಕೆರೆಸಿಕೊಂಡಿದ್ದ ಪ್ರಜಾಪತಿಯವರು, ತಮ್ಮ ಚೇಲಾಗಳೊಂದಿಗೆ ಸೇರಿಕೊಂಡು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು ಎಂದು ಸಂತ್ರಸ್ತ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣ ಉತ್ತರಪ್ರದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಆಗಿನಿಂದಲೂ ಈ ಪ್ರಕರಣ ವಿಚಾರಣೆ ಹಂತದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


