ಅತ್ಯಾಚಾರ ಆರೋಪಿ ಸಚಿವ ಪ್ರಜಾಪತಿ ಇನ್ನು ನಿಮ್ಮ ಸಂಪುಟದಲ್ಲಿದ್ದಾರೆ ಯಾಕೆ?: ಅಖಿಲೇಶ್‌ಗೆ ರಾಜ್ಯಪಾಲರ ಪ್ರಶ್ನೆ
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸಚಿವ ಗಾಯತ್ರಿ ಪ್ರಜಾಪತಿಯನ್ನು ಇನ್ನೂ ಸಚಿವ ಸಂಪುಟದಲ್ಲಿ...

Published On :
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸಚಿವ ಗಾಯತ್ರಿ ಪ್ರಜಾಪತಿಯನ್ನು ಇನ್ನೂ ಸಚಿವ ಸಂಪುಟದಲ್ಲಿ ಇಟ್ಟುಕೊಂಡಿರುವುದಕ್ಕೆ ರಾಜ್ಯಪಾಲ ರಾಮ್ ನಾಯ್ಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಸಂಪುಟದಲ್ಲಿ ಇನ್ನು ಅತ್ಯಾಚಾರಿ ಆರೋಪಿಯನ್ನು ಇಟ್ಟುಕೊಂಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ರಾಮ್ ನಾಯ್ಕ್ ಅಖಿಲೇಶ್ ಯಾದವ್ಗೆ ಪತ್ರ ಬರೆದಿದ್ದು ಗಾಯತ್ರಿ ಪ್ರಜಾಪತಿಯನ್ನು ಇನ್ನು ಯಾಕೆ ವಜಾ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.
ಮಹಿಳೆ ಮೇಲೆ ಅತ್ಯಾಚಾರ ಮತ್ತು ಆಕೆಯ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಗಾಯತ್ರಿ ಪ್ರಜಾಪತಿ ವಿರುದ್ಧ ಉತ್ತರಪ್ರದೇಶದ ಪೊಲೀಸರು ದೂರು ದಾಖಲಿಸಿದ್ದಾರೆ. ಇನ್ನು ಕಳೆದ ಶುಕ್ರವಾರ ಪೊಲೀಸರು ಪ್ರಜಾಪತಿ ಪಾಸ್ ಪೋರ್ಟ್ ರದ್ದುಕೊಳಿಸಿ ಆದೇಶ ಹೊರಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
governorರಾಜ್ಯಪಾಲUttar pradeshಉತ್ತರಪ್ರದೇಶAkhilesh Yadavಅಖಿಲೇಶ್ ಯಾದವ್Gayatri Prajapatiಗಾಯತ್ರಿ ಪ್ರಜಾಪತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


