ದೇಶ

ಭಾರತದಲ್ಲಿ ನಿರುದ್ಯೋಗ ಪ್ರಮಾಣ ಭಾರೀ ಇಳಿಕೆ: ವರದಿ

ದುಬಾರಿ ನೋಟುಗಳ ಮೇಲೆ ನಿಷೇಧ ಹೇರಿದ ಬಳಿಕ ದೇಶದಲ್ಲಿ ನಿರುದ್ಯೋಗ ಸಂಖ್ಯೆ ಹೆಚ್ಚಾಗಿದೆ ಎಂಬ ವಾದಗಳು ಇದೀಗ ಹುಸಿಯಾಗಿದೆ. ಭಾರತದಲ್ಲಿ ನಿರುದ್ಯೋಗ ಪ್ರಮಾಣ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ವರದಿಯೊಂದು...

ಭಾರತದಲ್ಲಿ ನಿರುದ್ಯೋಗ ಪ್ರಮಾಣ ಭಾರೀ ಇಳಿಕೆ: ವರದಿ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ದುಬಾರಿ ನೋಟುಗಳ ಮೇಲೆ ನಿಷೇಧ ಹೇರಿದ ಬಳಿಕ ದೇಶದಲ್ಲಿ ನಿರುದ್ಯೋಗ ಸಂಖ್ಯೆ ಹೆಚ್ಚಾಗಿದೆ ಎಂಬ ವಾದಗಳು ಇದೀಗ ಹುಸಿಯಾಗಿದೆ. ಭಾರತದಲ್ಲಿ ನಿರುದ್ಯೋಗ ಪ್ರಮಾಣ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ವರದಿಯೊಂದು ತಿಳಿಸಿದೆ. 
ಮುಖ್ಯ ಆರ್ಥಿಕ ಸಲಹೆಗಾರ ಸೌಮ್ಯ ಕಾಂತಿ ಅವರ ನೇತೃತ್ವದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಂಶೋಧನಾ ತಂಡ ಈ ವರದಿಯನ್ನು ನೀಡಿದ್ದು, ಭಾರತದಲ್ಲಿ ನಿರುದ್ಯೋಗ ಪ್ರಮಾಣ 2016ರ ಆಗಸ್ಟ್ ನಲ್ಲಿ ಇದ್ದ. ಶೇ.9.5 ಕ್ಕಿಂತ 2017 ಫೆಬ್ರವರಿಯಲ್ಲಿ ಶೇ.4.8ಕ್ಕೆ, ಜಾರ್ಖಾಂಡ್ ನಲ್ಲಿ ಶೇ.9.5ರಿಂದ 3.1ಕ್ಕೆ, ಒಡಿಶಾ ಶೇ.10.2 ರಿಂದ 2.9ಕ್ಕೆ ಹಾಗೂ ಬಿಹಾರ ರಾಜ್ಯದಲ್ಲಿ ಶೇ.13 ರಿಂದ 3.7ರಷ್ಟು ಇಳಿಕೆಯಾಗಿದೆ ಎಂದು ತಿಳಿಸಿದೆ. 
ಪ್ರಮುಖವಾಗಿ ಪ್ರಸ್ತುತ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಉತ್ತರ ಪ್ರದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಿನ ಪ್ರಮಾಣದಲ್ಲಿ ಇಳಿಯಾಗಿರುವುದು ಗಮನಾರ್ಹ ವಿಚಾರವಾಗಿದೆ. 
ಉತ್ತರಪ್ರದೇಶದಲ್ಲಿ ನಿರುದ್ಯೋಗ ಪ್ರಮಾಣ ಶೇ.17.1ರಿಂದ ಶೇ.2.9ಕ್ಕೆ ಇಳಿಕೆಯಾಗಿದೆ. ಮಧ್ಯಪ್ರದೇಶದಲ್ಲಿ ಶೇ.10 ರಿಂದ ಶೇ.2.7ಕ್ಕೆ ಇಳಿಕೆಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಜಾರಿಯಲ್ಲಿರುವ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ (ನರೇಗಾ) ಉದ್ಯೋಗವಾಕಾಶಗಳು ಹೆಚ್ಚಾಗಿದ್ದು, ಇದರಿಂದಾಗಿ ಹಳ್ಳಿಗಳಲ್ಲಿದ್ದ ನಿರುದ್ಯೋಗಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕೇಂದ್ರ ನರೇಗಾ ಯೋಜನೆ ಅಡಿಯಲ್ಲಿ 2017ರ ಫೆಬ್ರವರಿಯಲ್ಲಿ 83 ಲಕ್ಷ ಮನೆಮಂದಿಗೆ ಉದ್ಯೋಗ ಕಲ್ಪಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.