ದೇಶ

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪೂರ್ವಜರ ಮನೆಗೆ ಪ್ರಧಾನಿ ಮೋದಿ ಭೇಟಿ

ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಮಾ.06 ರಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪೂರ್ವಜನರಿದ್ದ ಮನೆಗೆ ತೆರಳಿ ಗೌರವ ಸಲ್ಲಿಸಿದ್ದಾರೆ.

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪೂರ್ವಜರ ಮನೆಗೆ ಪ್ರಧಾನಿ ಮೋದಿ ಭೇಟಿ
ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪೂರ್ವಜರ ಮನೆಗೆ ಪ್ರಧಾನಿ ಮೋದಿ ಭೇಟಿ
Published On :
ವಾರಾಣಸಿ: ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಮಾ.06 ರಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪೂರ್ವಜನರಿದ್ದ ಮನೆಗೆ ತೆರಳಿ ಗೌರವ ಸಲ್ಲಿಸಿದ್ದಾರೆ. 
ಗಡ್ವಾಘಾಟ್ ರಾಮ್ ನಗರದಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ನಿವಾಸಕ್ಕೆ ತೆರಳಿ 30 ನಿಮಿಷಗಳ ಕಾಲ ಇದ್ದ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಶಾಸ್ತ್ರಿ ಅವರ ಫೋಟೋಗಳಿರುವ ಕೋಠಡಿಯಲ್ಲಿ ಕುಳಿತಿದ್ದರು. ಈ ವೇಳೆ ಸ್ಥಳೀಯರು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ ಚರಿತ್ರೆಯನ್ನು ಹಾಡುಗಳ ಮೂಲಕ ಪ್ರಸ್ತುತ ಪಡಿಸಿದರು. 
ಇದಕ್ಕೂ ಮುನ್ನ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಫೋಟೋಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ, ಮನೆಯ ಗೇಟ್ ನ ಮುಂಭಾಗದಲ್ಲಿ ಸ್ಥಾಪಿಸಲಾಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ಥಳಿಗೆ ಹೂವಿನ ಹಾರ ಹಾಕಿ ಗೌರವ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.