ವಾರಣಾಸಿಯಲ್ಲಿ ಸೋಲುವ ಭೀತಿಯಿಂದ ಪ್ರಧಾನಿ ಮೋದಿ ಸಚಿವರನ್ನು ನಿಯೋಜಿಸಿದ್ದಾರೆ: ಸಲ್ಮಾನ್ ಖುರ್ಷಿದ್
ವಾರಣಾಸಿ ವಿಧಾನ ಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಪ್ರಧಾನಿ ನರೇಂದ್ರ ಮೋದಿ ಸಚಿವರನ್ನು ಚುನಾವಣಾ ಪ್ರಚಾರಕ್ಕೆ ನಿಯೋಜಿಸಿದ್ದಾರೆ ಎಂದು ಕಾಂಗ್ರೆಸ್ ..

ನವದೆಹಲಿ: ವಾರಣಾಸಿ ವಿಧಾನ ಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಪ್ರಧಾನಿ ನರೇಂದ್ರ ಮೋದಿ ಸಚಿವರನ್ನು ಚುನಾವಣಾ ಪ್ರಚಾರಕ್ಕೆ ನಿಯೋಜಿಸಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ದೇವಾಲಯಗಳ ನಗರ ಎಂದೇ ಪ್ರಸಿದ್ಧಿ ಪಡೆದಿರುವ ವಾರಣಾಸಿ ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾಗಿದ್ದು, ಕಳೆದ ಹಲವು ದಿನಗಳಿಂದ ಹಲವು ಕೇಂದ್ರ ಮಂತ್ರಿಗಳು ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಲ್ಮಾನ್ ಖುರ್ಷಿದ್, ಮೋದಿ ಸೋಲುವ ಭಯದಿಂದಾಗಿ ಕೇಂದ್ರದ ಸುಮಾರು 15-20 ಸಚಿವರುಗಳನ್ನು ನಿಯೋಜಿಸಿದ್ದಾರೆ. ತಾವು ಅಗತ್ಯ ಸೀಟುಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸ ಮೋದಿ ಅವರಿಗೆ ಇದ್ದಿದ್ದರೇ ವಾರಣಾಸಿಯಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿದ್ದರು. ಆದರೆ ಮೋದಿ ಆ ಪ್ರದೇಶಗಳಿಗೆ ಪ್ರಚಾರಕ್ಕೆ ಹೋಗುತ್ತಿಲ್ಲ, ಪರಿಸ್ಥಿತಿ ಹೇಗಿರಬಹುದು ಎಂದು ನೀವೇ ಊಹಿಸಿ ಎಂದು ಸುದ್ದಿಗಾರರನನ್ನು ಸಲ್ಮಾನ್ ಖುರ್ಷಿದ್ ಪ್ರಶ್ನಿಸಿದ್ದಾರೆ.
2014 ರಲ್ಲಿ ನಡೆದ ರ್ಯಾಲಿಯ ವೇಳೆ ಜನರನ್ನು ಭೇಟಿ ಮಾಡಲು ಅವಕಾಶ ನೀಡಿರಲಿಲ್ಲ ಎಂದು ಮೋದಿ ತಮ್ಮ ಭಾಷಣದ ವೇಳೆ ನಿನ್ನೆ ಹೇಳಿದ್ದಾರೆ. ಆದರೆ ಈಗ 2017, ಕಳೆದ ಇಷ್ಟು ವರ್ಷಗಳಲ್ಲಿ ಮೋದಿ ಎಷ್ಟು ಬಾರಿ ಬಂದು ಜನರನ್ನು ಭೇಟಿಯಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಯುಪಿಎ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಕದ್ದಿರು ಎನ್ ಡಿ ಎ ಸರ್ಕಾರ ಎಲ್ಲಾ ಜನಪ್ರಿಯ ಯೋಜನೆಗಳನ್ನು ಕದ್ದು, ತಮ್ಮದೇ ಸರ್ಕಾರದ ಯೋಜನೆಗಳಂತೆ ಬಿಂಬಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


