ಮುಸ್ಲಿಮರ ಅಲ್ಪಸಂಖ್ಯಾತ ಮಾನ್ಯತೆ ರದ್ದು ಮಾಡಿ: ಗಿರಿರಾಜ್ ಸಿಂಗ್
ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗುತ್ತಿರುವ ಸಮಯದಲ್ಲಿಯೇ ಮುಸ್ಲಿಂ ಸಮುದಾಯಕ್ಕೆ ನೀಡಲಾದ ಅಲ್ಪಸಂಖ್ಯಾತ ಮಾನ್ಯತೆಯನ್ನು ಪರಿಶೀಲನೆಗೊಳಪಡಿಸಬೇಕಿದೆ ಎಂಬ...

Published On :
ಲಖನೌ: ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗುತ್ತಿರುವ ಸಮಯದಲ್ಲಿಯೇ ಮುಸ್ಲಿಂ ಸಮುದಾಯಕ್ಕೆ ನೀಡಲಾದ ಅಲ್ಪಸಂಖ್ಯಾತ ಮಾನ್ಯತೆಯನ್ನು ಪರಿಶೀಲನೆಗೊಳಪಡಿಸಬೇಕಿದೆ ಎಂಬ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಇಂದು ದೇಶದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಏರಿಕೆಯಾಗುತ್ತಿದೆ. ಹಾಗಾಗಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿರುವ ಅಲ್ಪ ಸಂಖ್ಯಾತರೆಂಬ ಮಾನ್ಯತೆಯನ್ನು ಸರ್ಕಾರ ಹಿಂದಕ್ಕೆ ಪಡೆಯಬೇಕು ಎಂದು ಹೇಳಿದ್ದಾರೆ.
ಅಲ್ಪ ಸಂಖ್ಯಾತ ಸ್ಥಾನಗಳ ಕುರಿತು ಹೊಸದಾಗಿ ಚರ್ಚೆ ನಡೆಯಬೇಕಿದೆ. 20 ಕೋಟಿಗೂ ಹೆಚ್ಚಿರುವವರು ಅಲ್ಪಸಂಖ್ಯಾತ ಜನ ಹೇಗಾಗುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಪ್ಯೂ ರಿಸರ್ಚ್ ಸೆಂಟರ್ ವರದಿಯನ್ನು ಶೇರ್ ಮಾಡಿರುವ ಅವರು ಅಲ್ಪಸಂಖ್ಯಾತರ ಕುರಿತು ಹೊಸ ಚರ್ಚೆಗೆ ಕರೆ ನೀಡಿದ್ದಾರೆ.
ಮುಸಲ್ಮಾನರ ಜನಸಂಖ್ಯೆ ವಿಶ್ವದಾದ್ಯಂತ ಶರವೇಗದಲ್ಲಿ ಹೆಚ್ಚಾಗುತ್ತಿದ್ದು, ಇದೇ ರೀತಿಯಲ್ಲಿ ವೃದ್ಧಿಯಾದರೆ 2050ರೊಳಗೆ ಭಾರತ ಜಗತ್ತಿನಲ್ಲಿಯೇ ಅತೀದೊಡ್ಡ ಮುಸ್ಲಿಂ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂಬ ವರದಿಯನ್ನು ಈ ಹಿಂದೆ ಅಮೆರಿಕದ ಪ್ಯೂ ರಿಸರ್ಚ್ ಸೆಂಟರ್ ಬಹಿರಂಗಪಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


