ದೇಶ

ಹಿಜ್ಬುಲ್ ಮುಜಾಹಿದ್ದೀನ್ ಅಡಗುತಾಣಗಳ ಮೇಲೆ ದಾಳಿ: 3 ಉಗ್ರರ ಬಂಧನ

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಅಡಗುತಾಣಗಳ ಮೇಲೆ ಜಮ್ಮುಮತ್ತು ಕಾಶ್ಮೀರ ಪೊಲೀಸರು ದಾಳಿ ನಡೆಸಿದ್ದು, ಮೂವರು ಶಂಕಿತ ಉಗ್ರರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ...

ಹಿಜ್ಬುಲ್ ಮುಜಾಹಿದ್ದೀನ್ ಅಡಗುತಾಣಗಳ ಮೇಲೆ ದಾಳಿ: 3 ಉಗ್ರರ ಬಂಧನ
ಸಾಂದರ್ಭಿಕ ಚಿತ್ರ
Published On :
ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಅಡಗುತಾಣಗಳ ಮೇಲೆ ಜಮ್ಮುಮತ್ತು ಕಾಶ್ಮೀರ ಪೊಲೀಸರು ದಾಳಿ ನಡೆಸಿದ್ದು, ಮೂವರು ಶಂಕಿತ ಉಗ್ರರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 
ಶ್ರೀನಗರ ಬೆಮಿನಾ ಬೈಪಾಸ್ ಕ್ರಾಸ್ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ ಶಂಕಿತ ಉಗ್ರರು ಸಿಕ್ಕಿಬಿದ್ದಿದ್ದಾರೆ. ಉಗ್ರರ ಬಳಿಯಿದ್ಲ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಬಳಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ್ದ ಉಗ್ರನೊಬ್ಬನನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು. ಈ ವೇಳೆ ಉಗ್ರರ ನ ಬಳಿಯಿದ್ದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.