ವಿಶ್ವ ಮಹಿಳಾ ದಿನಾಚರಣೆ: ಶುಭಾಶಯ ಕೋರಿದ ಪ್ರಧಾನಿ ಮೋದಿ
ವಿಶ್ವದಾದ್ಯಂತ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ...

Published On :
ನವದೆಹಲಿ: ವಿಶ್ವದಾದ್ಯಂತ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು ದೇಶದ ಮಹಿಳೆಯರ ಧೈರ್ಯ ಮತ್ತು ಸಾಹಸಕ್ಕೆ ನನ್ನ ಸೆಲ್ಯೂಟ್ ಎಂದು ಹೇಳಿದ್ದಾರೆ.
ನಾರೀಯರ ಅದಮ್ಯ ಚೇತನ, ಸಂಕಲ್ಪ ಹಾಗೂ ಅವಲ್ಲಿರುವ ಸಮರ್ಪಣೆಯ ಭಾವಕ್ಕೆ ಈ ಮೂಲಕ ಸೆಲ್ಯೂಟ್ ಹೊಡೆಯುತ್ತಿದ್ದೇನೆ ಹಾಗೂ ಎಲ್ಲಾ ಮಹಿಳೆಯರಿಗೂ ಮೂಲಕ ವಿಶ್ವ ಮಹಿಳಾ ದಿನಾಚರಣೆ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ತಿಳಿಸಿದ್ದಾರೆ.
ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಗುಜರಾತ್'ನ ಗಾಂಧಿ ನಗರದಲ್ಲಿ ಕೇಂದ್ರ ಹಾಗೂ ಗುಜರಾತ್ ಸರ್ಕಾರ ಗ್ರಾಮೀಣ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳಾ ಸರ್'ಪಂಚ್ ಗಳಿಗಾಗಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಕಾರ್ಯಕ್ರಮದಲ್ಲಿ ಮಹಿಳೆಯರನ್ನುದ್ದೇಶಿ ಪ್ರಧಾನಮಂತ್ರಿ ನರೇಂದ್ರಮೋದಿಯವರು ಮಾತನಾಡಲಿದ್ದಾರೆ. ಅಲ್ಲದೆ, ಉತ್ತಮ ಸಾಧನೆ ಮಾಡಿದ ಮಹಿಳೆಯರಿಗೆ ಇದೇ ವೇಳೆ ಗೌರವವನ್ನು ಸಲ್ಲಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


