ದೇಶ

ಪುಲ್ವಾಮ ಎನ್'ಕೌಂಟರ್: ಭದ್ರತಾ ಪಡೆ, ಸ್ಥಳೀಯರ ನಡುವೆ ಘರ್ಷಣೆ, ಓರ್ವ ನಾಗರೀಕ ಸಾವು

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರಿಗಾಗಿ ನಡೆಸಲಾಗುತ್ತಿದ್ದ ಎನ್ ಕೌಂಟರ್ ವೇಳೆ ಭದ್ರತಾ ಪಡೆಗಳು ಹಾಗೂ ಸ್ಥಳೀಯರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ ಓರ್ವ ನಾಗರೀಕ ಸಾವನ್ನಪ್ಪಿರುವುದಾಗಿ...

ಪುಲ್ವಾಮ ಎನ್'ಕೌಂಟರ್: ಭದ್ರತಾ ಪಡೆ, ಸ್ಥಳೀಯರ ನಡುವೆ ಘರ್ಷಣೆ, ಓರ್ವ ನಾಗರೀಕ ಸಾವು
ಸಂಗ್ರಹ ಚಿತ್ರ
Published On :
ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರಿಗಾಗಿ ನಡೆಸಲಾಗುತ್ತಿದ್ದ ಎನ್ ಕೌಂಟರ್ ವೇಳೆ ಭದ್ರತಾ ಪಡೆಗಳು ಹಾಗೂ ಸ್ಥಳೀಯರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ ಓರ್ವ ನಾಗರೀಕ ಸಾವನ್ನಪ್ಪಿರುವುದಾಗಿ ಗುರುವಾರ ಮೂಲಗಳಿಂದ ತಿಳಿದುಬಂದಿದೆ. 
ಪುಲ್ವಾಮ ಜಿಲ್ಲೆಯ ಪದಗಂಪೋರ ಗ್ರಾಮದಲ್ಲಿ 4-5 ಉಗ್ರರು ಅಡಗಿ ಕುಳಿತಿದ್ದರು. ಈ ಹಿನ್ನಲೆಯಲ್ಲಿ ಸೇನಾಪಡೆ ಕಳೆದ ರಾತ್ರಿಯಿಂದಲೂ ಕಾರ್ಯಾಚರಣೆ ನಡೆಸುತ್ತಿದೆ. ಇಂದು ಬೆಳಿಗ್ಗೆ ಕೂಡ ಕಾರ್ಯಾಚರಣೆ ನಡೆಸಲಾಗಿದ್ದು, ಇಬ್ಬರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರರನ್ನು ಹತ್ಯೆ ಮಾಡಿದೆ. ಇಬ್ಬರು ಉಗ್ರರನ್ನು ಜಹಾಂಗೀರ್ ಗೈನ್, ಶಫಿ ಶೆರ್ಗೊಜಿರಿ ಎಂದು ಗುರ್ತಿಸಲಾಗಿದೆ. 
ಸೇನಾ ಪಡೆ ಕಾರ್ಯಾಚರಣೆ ವೇಳೆ ಕೆಲ ಸ್ಥಳೀಯರು ಇದಕ್ಕೆ ಅಡ್ಡಿಪಡಿಸಲು ಮುಂದಾಗಿದ್ದು, ಈ ವೇಳೆ ಸೇನಾ ಪಡೆ ಹಾಗೂ ನಾಗರೀಕರ ನಡುವೆ ಘರ್ಷಣೆ ಏರ್ಪಟ್ಟಿದೆ. ಆ ವೇಳೆ ಪೊಲೀಸರು ನಡೆಸಿದ್ದ ಗುಂಡಿನ ದಾಳಿಯಲ್ಲಿ 15 ವರ್ಷದ ಶಾಲಾ ಬಾಲಕನೊಬ್ಬ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಅಲ್ಲದೆ. ಇಬ್ಬರು ನಾಗರೀಕರಿಗೂ ಗಾಯವಾಗಿರುವುದಾಗಿ ವರದಿಗಳು ತಿಳಿಸಿವೆ. ಪ್ರಸ್ತುತ ಸ್ಥಳದಲ್ಲಿ ಉಗ್ರರು ಇನ್ನೂ ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.