ದೇಶ

ಪುಲ್ವಾಮ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಸೇನಾ ಪಡೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ...

ಪುಲ್ವಾಮ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಸಂಗ್ರಹ ಚಿತ್ರ
Published On :
ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಸೇನಾ ಪಡೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. 
ಪುಲ್ವಾಮಾದ ಪದಗಂಪೋರ ಪ್ರದೇಶದಲ್ಲಿ ಅಡಗಿ ಕುಳಿತಿದ್ದ 4-5 ಐವರು ಉಗ್ರರು ಸೇನಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸುತ್ತಿದ್ದರು. ಉಗ್ರರನ್ನು ಸದೆಬಡಿಯಲು ಸೇನಾ ಪಡೆ ಇಂದು ಬೆಳಿಗ್ಗೆ ಕಾರ್ಯಾಚರಅಣೆಗಿಳಿದಿತ್ತು. 
ಕಾರ್ಯಾಚರಣೆಯಲ್ಲಿ 130 ಬಿಎನ್ ಸಿಆರ್'ಪಿಎಫ್, 55 ಆರ್'ಆರ್ ಮತ್ತು ಎಸ್ ಒಜಿ ಕೈಜೋಡಿಸಿ ಕಾರ್ಯಾಚರಣೆ ನಡೆಸುತ್ತಿತ್ತು. ಇದೀಗಿ ಅಡಗಿ ಕುಳಿತು ದಾಳಿ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನಾ ಪಡೆ ಯಶಸ್ವಿಯಾಗಿದೆ. ಪ್ರಸ್ತುತ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದೂ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.