ದೇಶ

'ಸರ್ಜಿಕಲ್ ಸ್ಟ್ರೈಕ್'ನಿಂದಾಗಿ ಸೇನೆಯ ನೈತಿಕ ಸ್ಥೈರ್ಯ ಹೆಚ್ಚಾಗಿದೆ: ಕೇಂದ್ರ ಸರ್ಕಾರ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಸೀಮಿತ ದಾಳಿ ನಡೆಸಿದ ಬಳಿಕ ಭಾರತೀಯ ಸೇನೆಯ ನೈತಿಕ ಸ್ಥೈರ್ಯ ಮತ್ತಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ...

'ಸರ್ಜಿಕಲ್ ಸ್ಟ್ರೈಕ್'ನಿಂದಾಗಿ ಸೇನೆಯ ನೈತಿಕ ಸ್ಥೈರ್ಯ ಹೆಚ್ಚಾಗಿದೆ: ಕೇಂದ್ರ ಸರ್ಕಾರ
ಸಂಗ್ರಹ ಚಿತ್ರ
Published On :
ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಸೀಮಿತ ದಾಳಿ ನಡೆಸಿದ ಬಳಿಕ ಭಾರತೀಯ ಸೇನೆಯ ನೈತಿಕ ಸ್ಥೈರ್ಯ ಮತ್ತಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ. 
ಲೋಕಸಭೆಯಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದ ಪ್ರಶ್ನಾವಳಿ ಅವಧಿಯಲ್ಲಿ ಮಾತನಾಡಿರುವ ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಸುಭಾಷ್ ಭಮ್ರೆ ಅವರು, ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಸೇನಾ ಪಡೆ ದಾಳಿ ನಡೆಸಿದ ಬಳಿಕ ಉಗ್ರರ ಚಟುವಟಿಕೆಗಳ ಮೇಲೆ ಭಾರೀ ಹೊಡೆಬಿದ್ದಿತ್ತು. ಅಲ್ಲದೆ, ಉಗ್ರರಿಗೆ ನೆರವು ನೀಡುತ್ತಿದ್ದವರ ಮೇಲೂ ಹೊಡೆತ ಬಿದ್ದಿತ್ತು ಎಂದು ಹೇಳಿದ್ದಾರೆ. 
ಭಾರತದ ಮೇಲೆ ದೊಡ್ಡ ಮಟ್ಟದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಸಂಘಟನೆಗಳಿಗೆ ಈ ಸೀಮಿತ ದಾಳಿ ಸಾಕಷ್ಟು ಹೊಡೆತವನ್ನು ನೀಡಿತ್ತು. 2016ರ ಸೆಪ್ಟೆಂಬರ್ 28 ಮತ್ತು 29 ರಂದು ನಡೆಸಿದ ಸೇನಾ ಪಡೆಯ ಕಾರ್ಯಾಚರಣೆ ಭಾರತೀಯ ಸೇನೆ ನೈತಿಕ ಸ್ಥೈರ್ಯವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿತ್ತು. ಯೋಧರ ಮಾನಸಿಕ ಸ್ಥಿತಿಗೆ ಸುಧಾರಿಕೆಗೆ ಸೀಮಿತ ದಾಳಿಯೇ ದೊಡ್ಡ ಔಷಧಿಯಾಗಿದೆ. ಸೀಮಿತ ದಾಳಿಯಲ್ಲಿ ಕೈಜೋಡಿಸಿದವರಿಗೆ ಬಹುಮಾನಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.