ಮಧ್ಯ ಪ್ರದೇಶ: ನಿರ್ಮಾಣ ಹಂತದ ಪೊಲೀಸ್ ಅಕಾಡೆಮಿ ಕಟ್ಟಡ ಕುಸಿತ, ಓರ್ವನ ಸಾವು, ಹಲವರಿಗೆ ಗಾಯ
ನಿರ್ಮಾಣ ಹಂತದ ಪೊಲೀಸ್ ತರಬೇತಿ ಕೇಂದ್ರೀಯ ಅಕಾಡೆಮಿ ಕಟ್ಟಡ ಕುಸಿದ ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ಭೋಪಾಲ್: ನಿರ್ಮಾಣ ಹಂತದ ಪೊಲೀಸ್ ತರಬೇತಿ ಕೇಂದ್ರೀಯ ಅಕಾಡೆಮಿ ಕಟ್ಟಡ ಕುಸಿದ ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.
ಮಧ್ಯ ಪ್ರದೇಶದ ಭೋಪಾಲ್ ನ ಬಿಲ್ಖಿರಿಯಾ ಪ್ರದೇಶದಲ್ಲಿದ್ದ ನಿರ್ಮಿಸಲಾಗುತ್ತಿರುವ ಕಟ್ಟಡ ಕಳೆದ ರಾತ್ರಿ ಕುಸಿದಿದ್ದು, ಪರಿಣಾಮ ಕಟ್ಟಡದ ಕೆಳಗೆ ಇದ್ದವರ ಪೈಕಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಂತೆಯೇ ಇತರೆ 16 ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಸ್ಥಳೀಯ ಪೊಲೀಸರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡದ ಅವಶೇಷಗಳಡಿಯಲ್ಲಿ ಹಲವು ಮಂದಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಕಟ್ಟಡ ಕುಸಿತ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್
ಇನ್ನು ಘಟನೆ ಕುರಿತಂತೆ ವಿಚಾರ ತಿಳಿಯುತ್ತಿದ್ದಂತೆಯೇ ಅಧಿಕಾರಿಗಳಿಂದ ಮಾಹಿತ ಪಡೆದಿರುವ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಅವರು ತನಿಖೆಗೆ ಆದೇಶಿಸಿದ್ದಾರೆ. ಅಂತೆಯೇ ಕಟ್ಟಡ ಕುಸಿತ ಸಂತ್ರಸ್ತರಿಗೆ ಪರಿಹಾರ ಕೂಡ ಘೋಷಣೆ ಮಾಡಿದ್ದಾರೆ. ಸತ್ತ ವ್ಯಕ್ತಿಯ ಕುಟುಂಬಕ್ಕೆತಲಾ 2 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ಮತ್ತು ಸಣ್ಣ ಪುಟ್ಟ ಗಾಯಾಳುಗಳಿಗೆ ಸಾವಿರ ಘೋಷಣೆ ಮಾಡಿದ್ದಾರೆ. ಇದಲ್ಲದೆ ಗಾಯಾಳುಗಳಿಗೆ ಉಚಿಚ ಚಿಕಿತ್ಸೆ ಭರವಸೆ ಕೂಡ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


