ದೇಶ

ವಿವಿಐಪಿ ಕ್ಯಾಪ್ಟರ್ ಹಗರಣ: ಮಾಧ್ಯಮ ಪಾತ್ರದ ಬಗ್ಗೆ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಅಗಸ್ಟಾ ವೆಸ್ಟ್ ಲ್ಯಾಂಡ್ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪಾತ್ರದ ಕುರಿತು ತನಿಖೆ ನಡೆಸುವಂತೆ...

ವಿವಿಐಪಿ ಕ್ಯಾಪ್ಟರ್ ಹಗರಣ: ಮಾಧ್ಯಮ ಪಾತ್ರದ ಬಗ್ಗೆ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಸುಪ್ರೀಂ ಕೋರ್ಟ್
Published On :
ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪಾತ್ರದ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಮಾಧ್ಯಮ ಪಾತ್ರದ ಬಗ್ಗೆ ಎಸ್ಐಟಿ ತನಿಖೆ ಕೋರಿ ಹಿರಿಯ ಪತ್ರಕರ್ತ ಹರಿ ಜೈಸಿಂಗ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ದೀಪಕ್ ಮಿಸ್ರ ನೇತೃತ್ವದ ಪೀಠ, ಇದು ಮಾಧ್ಯಮ ಸ್ವಾತಂತ್ರದ ಮೇಲೆ ದಾಳಿ ಮಾಡಿದಂತಾಗುತ್ತದೆ. ಹಗರಣದಲ್ಲಿ ನೇರವಾಗಿ ಭಾಗಿಯಾಗದ ಹೊರತು ನಾವು ಮಾಧ್ಯಮ ವಿರುದ್ಧ ಯಾವುದೇ ತನಿಖೆಗೆ ಆದೇಶಿಸುವುದಿಲ್ಲ ಎಂದು ಹೇಳಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಕ್ಕೆ ಸ್ವಾತಂತ್ರ್ಯ ನೀಡಲಾಗಿದೆ. ಈ ವಿಚಾರದಲ್ಲಿ ಮಾವು ಮಾಧ್ಯಮಗಳ ಹಕ್ಕನ್ನು ಮೊಟಕುಗೊಳಿಸುವುದಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ ಮಾಧ್ಯಮ ಪಾತ್ರದ ಬಗ್ಗೆ ತನಿಖಾ ಸಂಸ್ಥೆ ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ  ಮುಂದೆ ಬಂದರೆ, ಹಾಗ ನಾವು ತನಿಖೆಗೆ ಆದೇಶಿಸುತ್ತೇವೆ ಎಂದು ಪೀಠ ಹೇಳಿದೆ.
ಕೆಲವು ಮಾಧ್ಯಮ ವ್ಯಕ್ತಿಗಳು ಲಂಚ ಪಡೆದು ವಿವಿಐಪಿ ಕ್ಯಾಪ್ಟರ್ ಒಪ್ಪಂದದ ಪರವಾಗಿ ವರದಿ ಮಾಡುವ ಮೂಲಕ ಸರ್ಕಾರದ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಪಿಐಎಲ್ ನಲ್ಲಿ ಆರೋಪಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.