ಬಿಹಾರದಲ್ಲಿಯೂ ಚುನಾವಣೋತ್ತರ ಸಮೀಕ್ಷೆಗಳನ್ನು ನೋಡಿದ್ದೇವೆ: ರಾಹುಲ್ ಗಾಂಧಿ
ಬಿಹಾರ ವಿಧಾನಸಭಾ ಚುನಾವಣೆ 2015ರಲ್ಲಿಯೂ ಚುನಾವಣೋತ್ತರ ಸಮೀಕ್ಷಾ ವರದಿಗಳನ್ನು ನೋಡಿದ್ದೇವೆ. ಆದರೆ, ಫಲಿತಾಂಶ ಪ್ರಕಟಗೊಂಡ ಬಳಿಕ ಸಮೀಕ್ಷಾ ಫಲಿತಾಂಶಗಳು ಸುಳ್ಳಾಗಿತ್ತು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು...

Published On :
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ 2015ರಲ್ಲಿಯೂ ಚುನಾವಣೋತ್ತರ ಸಮೀಕ್ಷಾ ವರದಿಗಳನ್ನು ನೋಡಿದ್ದೇವೆ. ಆದರೆ, ಫಲಿತಾಂಶ ಪ್ರಕಟಗೊಂಡ ಬಳಿಕ ಸಮೀಕ್ಷಾ ಫಲಿತಾಂಶಗಳು ಸುಳ್ಳಾಗಿತ್ತು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ.
ವಿಧಾನಸಭಾ ಚುನಾವಣೆ 2017ರ ಚುನಾವಣೋತ್ತರ ಸಮೀಕ್ಷಾ ವರದಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಉತ್ತರಪ್ರದೇಶದಲ್ಲಿ ಮೈತ್ರಿ ಪಕ್ಷಗಳು ಗೆಲವು ಸಾಧಿಸಲಿದೆ. ಇಂತಹ ರೀತಿಯ ಚುನಾವಣೋತ್ತರ ಸಮೀಕ್ಷಾ ವರದಿಗಳನ್ನು ಈ ಹಿಂದೆ ನಾವು ಬಿಹಾರ ಚುನಾವಣಾ ಸಂದರ್ಭದಲ್ಲೂ ನೋಡಿದ್ದೆವು. ಚುನಾವಣಾ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ. ಫಲಿತಾಂಶ ಪ್ರಕಟಗೊಂಡ ಬಳಿಕವೇ ನಾವು ಮಾತನಾಡುತ್ತೇವೆಂದು ಹೇಳಿದ್ದಾರೆ.
ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳಿಗೆ ಅತ್ಯಂತ ಪ್ರತಿಷ್ಠೆಯ ಕಣವಾಗಿದ್ದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಚುನಾವಣೋತ್ತರ ಸಮೀಕ್ಷಾ ವರದಿಗಳು ನಿನ್ನೆಯಷ್ಟೇ ಬಹಿರಂಗಗೊಂಡಿತ್ತು, ದೇಶದ ಅತಿ ದೊಡ್ಡ ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಆದರೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸುವ ಸಾಧ್ಯತೆ ಇದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rahul Gandhiರಾಹುಲ್ ಗಾಂಧಿಚುನಾವಣೋತ್ತರ ಸಮೀಕ್ಷೆವಿಧಾನಸಭಾ ಚುನಾವಣೆ 2017Assembly election 2017Exit polls result
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


