ವಿಶ್ವದ ದಢೂತಿ ಮಹಿಳೆಗೆ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆ ಯಶಸ್ವಿ
ತೂಕ ಇಳಿಸಿಕೊಳ್ಳಲು ಮುಂಬೈ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಶ್ವದ ದಢೂತಿ ಮಹಿಳೆ ಎಮಾನ್ ಅಹ್ಮದ್ ಅವರಿಗೆ ನಡೆಸಲಾದ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ (ತೂಕ ಇಳಿಕೆಯ ಶಸ್ತ್ರಚಿಕಿತ್ಸೆ) ಯಶಸ್ವಿಯಾಗಿದೆ

Published On :
ಮುಂಬೈ: ತೂಕ ಇಳಿಸಿಕೊಳ್ಳಲು ಮುಂಬೈ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಶ್ವದ ದಢೂತಿ ಮಹಿಳೆ ಎಮಾನ್ ಅಹ್ಮದ್ ಅವರಿಗೆ ನಡೆಸಲಾದ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ (ತೂಕ ಇಳಿಕೆಯ ಶಸ್ತ್ರಚಿಕಿತ್ಸೆ) ಯಶಸ್ವಿಯಾಗಿದೆ ಎಂದು ಸೈಫೀ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಈಗಾಗಲೇ 120 ಕೆಜಿ ತೂಕ ಇಳಿಸಿಕೊಂಡಿರುವ ಈಜಿಪ್ಟ್ ನ ಮಹಿಳೆಗೆ ಹೊಟ್ಟೆಭಾಗದಲ್ಲಿ ಕೊಬ್ಬನ್ನು ಕಡಿಮೆಗೊಳಿಸಲು ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಸೊಂಟದ ಭಾಗ ಶೇ.15 ರಷ್ಟು ಇಳಿಕೆಯಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಮಾ.7 ರಂದು ಶಸ್ತ್ರಚಿಕಿತ್ಸೆ ನಡೆದಿದ್ದು, ಮತ್ತೆ 100 ಕೆಜಿ ತೂಕ ಇಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ತೂಕ ಇಳಿಕೆ ಚಿಕಿತ್ಸೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿರುವ ಮಹಿಳೆ ದ್ರವ ಆಹಾರವನ್ನು ಹೆಚ್ಚು ಸೇವಿಸುತ್ತಿದ್ದಾರೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ. ಮುಂದಿನ ಶಸ್ತ್ರಚಿಕಿತ್ಸೆ ವೇಳೆಗೆ 100 ಕೆಜಿಯಷ್ಟು ತೂಕ ಇಳಿಕೆ ಮಾಡಲಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mumbaiವಿಶ್ವದ ದಢೂತಿ ಮಹಿಳೆworld\'s Heaviest womanEman Ahmedbariatric surgeryಎಮಾನ್ ಅಹ್ಮದ್ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


