ದೇಶ

ಶ್ರೀಲಂಕಾ: 53 ಭಾರತೀಯ ಮೀನುಗಾರರ ಬಿಡುಗಡೆ

ಅಂತರರಾಷ್ಟ್ರೀಯ ಜಲಗಡಿ ಉಲ್ಲಂಘಿಸಿದ ಅಪಾದನೆಗಾಗಿ ಬಂಧನಕ್ಕೊಳಗಾಗಿದ್ದ 53 ಭಾರತೀಯ ಮೀನುಗಾರರನ್ನು ಶ್ರೀಲಂಕಾ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ...

ಶ್ರೀಲಂಕಾ: 53 ಭಾರತೀಯ ಮೀನುಗಾರರ ಬಿಡುಗಡೆ
ಸಂಗ್ರಹ ಚಿತ್ರ
Published On :
ಕೊಲಂಬೋ: ಅಂತರರಾಷ್ಟ್ರೀಯ ಜಲಗಡಿ ಉಲ್ಲಂಘಿಸಿದ ಅಪಾದನೆಗಾಗಿ ಬಂಧನಕ್ಕೊಳಗಾಗಿದ್ದ 53 ಭಾರತೀಯ ಮೀನುಗಾರರನ್ನು ಶ್ರೀಲಂಕಾ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ. 
ಕೆಲ ದಿನಗಳ ಹಿಂದಷ್ಟೇ ಭಾರತೀಯ ಮೀನುಗಾರನೊಬ್ಬನನ್ನು ಶ್ರೀಲಂಕಾ ವಾಯುಪಡೆ ಗುಂಡಿಟ್ಟು ಹತ್ಯೆ ಮಾಡಿತ್ತು. ಈ ಹತ್ಯೆಗೆ ತೀವ್ರ ಖಂಡನೆಗಳು ವ್ಯಕ್ತವಾಗಿತ್ತು. ಅಲ್ಲದೆ, ಶ್ರೀಲಂಕಾ ಸರ್ಕಾರದ ವಿರುದ್ಧ ತಮಿಳುನಾಡಿನ ಹಲವಡೆ ಭಾರೀ ಪ್ರತಿಭಟನೆಗಳು ನಡೆದಿದ್ದವು. 
ಈ ಹಿನ್ನಲೆಯಲ್ಲಿ ಉಭಯ ರಾಷ್ಟ್ರಗಳಲ್ಲಿ ಸೌಹಾರ್ದಯುತ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದ್ದು, ದ್ವಿಪಕ್ಷೀಯ ಸಂಬಂಧ ಉತ್ತಮವಾಗಿರುವ ಸಲುವಾಗಿ ಉಭಯ ದೇಶಗಳ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿರುವ ಮೀನುಗಾರರನ್ನು ಬಿಡುಗಡೆ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು. ಇದರಂತೆ ಇಂದು ಶ್ರೀಲಂಕಾ ಸರ್ಕಾರ 53 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ. 
ಜಫ್ನಾ ಜೈಲಿನಲ್ಲಿದ್ದ 53 ಮೀನುಗಾರರನ್ನು ಈಗಾಗಲೇ ಶ್ರೀಲಂಕಾ ಸರ್ಕಾರ ಬಿಡುಗಡೆ ಮಾಡಿದ್ದು, ವುವುನಿಯಾ ಜೈಲಿನಲ್ಲಿ ಇನ್ನೂ 32 ಭಾರತೀಯ ಮೀನುಗಾರರು ಸೆರೆವಾಸ ಅನುಭವಿಸುತ್ತಿದ್ದಾರೆಂದು ಮೀನುಗಾರಿಕೆ ಸಚಿವಾಲಯ ಹೇಳಿದೆ. 
ತನ್ನ ವಶದಲ್ಲಿರುವ 85 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡುವುದಾಗಿ ಈ ಹಿಂದೆ ಶ್ರೀಲಂಕಾ ಸರ್ಕಾರ ಭಾರತೀಯ ರಾಯಭಾರಿ ಕಚೇರಿಗೆ ಮಾಹಿತಿ ನೀಡಿತ್ತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಗೋಪಾಲ್ ಬಾಗ್ಲೆ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.