ಪಂಚ ರಾಜ್ಯ ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆ, ಚುನಾವಣೆಗೆ ದಿಕ್ಸೂಚಿ: ಯಡ್ಯೂರಪ್ಪ
ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆ ಹಾಗೂ 2018 ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಯಡ್ಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

Published On :
ಬೆಂಗಳೂರು: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆ ಹಾಗೂ 2018 ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ರದಿಂದ ಈ ಫಲಿತಾಂಶ ದೊರೆತಿದ್ದು, ಉತ್ತರ ಪ್ರದೇಶ ಮಾದರಿಯ ಫಲಿತಾಂಶವೂ ರಾಜ್ಯದಲ್ಲಿ ಬರಲಿದ್ದು, ದೇಶಾದ್ಯಂತ ಬಿಜೆಪಿ, ಮೋದಿ ಪರ ಅಲೆ ಎದ್ದಿದೆ ಎಂದು ಯಡ್ಯೂರಪ್ಪ ಹೇಳಿದ್ದಾರೆ. ಹಗುರವಾಗಿ ಮಾತನಾಡುತ್ತಿದ್ದವರಿಗೆ ಜನತೆ ತಕ್ಕ ಉತ್ತರ ನೀಡಿದ್ದಾರೆ. ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶದ ಕೀರ್ತಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಬೇಕು, ಚುನಾವಣೆಯ ಫಲಿತಾಂಶ ಮುಂಬರುವ ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯ ಮೇಲೂ ಪರಿಣಾಮ ಬೀರಲಿದ್ದು, ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಯಡ್ಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕರ್ನಾಟಕBS Yeddyurappaಫಲಿತಾಂಶಬಿಎಸ್ ಯಡ್ಯೂರಪ್ಪFive state elections results-2017Karnataka By-electionsಪಂಚ ರಾಜ್ಯಗಳ ಚುನಾವಣೆ-2017
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


