ಗೋವಾದಲ್ಲಿ ಸಿಎಂ ಪರ್ಸೇಕರ್ ಗೆ ಮುಖಭಂಗ, ಮ್ಯಾಂಡ್ರೆಮ್ ಕ್ಷೇತ್ರದಲ್ಲಿ ಸೋಲು!
ಗೋವಾ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾ ರೂಢ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಗೋವಾ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ತಮ್ಮ ಸ್ವಕ್ಷೇತ್ರದಲ್ಲೇ ಸೋಲು ಕಂಡಿದ್ದಾರೆ.

ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾ ರೂಢ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಗೋವಾ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ತಮ್ಮ ಸ್ವಕ್ಷೇತ್ರದಲ್ಲೇ ಸೋಲು ಕಂಡಿದ್ದಾರೆ.
ಇತ್ತೀಚಿನ ವರದಿಗಳು ಬಂದಾಗ ಗೋವಾದ ಒಟ್ಟು 40 ಕ್ಷೇತ್ರಗಳ ಪೈಕಿ ಬಿಜೆಪಿ 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ 11 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಗೋವಾದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು 21 ಕ್ಷೇತ್ರಗಳ ಅವಶ್ಯಕತೆ ಇದೆ.
ಪರ್ಸೇಕರ್ ಗೆ ಮುಖಭಂಗ, ಮ್ಯಾಂಡ್ರೆಮ್ ಕ್ಷೇತ್ರದಲ್ಲಿ ಸೋಲು!
ಇನ್ನು ಗೋವಾ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ತಮ್ಮ ಸ್ವಕ್ಷೇತ್ರ ಕಳೆದುಕೊಂಡಿದ್ದು, ಮ್ಯಾಂಡ್ರೆಮ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಸೋಲು ಕಂಡಿದ್ದಾರೆ. ಪರ್ಸೇಕರ್ ಅವರು ಕಾಂಗ್ರೆಸ್ ನ ದಯಾನಂದ ಸೋಪ್ಪೆ ವಿರುದ್ಧ ಸೋಲು ಕಂಡಿದ್ದಾರೆ. ಇನ್ನು ಎನ್ ಸಿಪಿ ಮುಖಂಡ ಚರ್ಚಿಲ್ ಅಲೆಮೋವ ಅವರು ಬೆನಾಲಿಮ್ ಕ್ಷೇತ್ರದಲ್ಲಿ ಜಯ ಸಾಧಿಸಿದ್ದು, ಸ್ವತಂತ್ರ ಅಭ್ಯರ್ಥಿ ಸೀಟಾನೋ ಸಿಲ್ವಾ ಅವರ ವಿರುದ್ಧ ಜಯಗಳಿಸಿದ್ದಾರೆ. ಗೋವಾ ಚುನಾವಣಾಯಲ್ಲಿ ಇದು ಎನ್ ಸಿಪಿ ಪಕ್ಷದ ಮೊದಲ ಗೆಲುವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


