ಅಪ್ಪಳಿಸುವುದು ಮೋದಿ ಅಲೆಯಲ್ಲ, 'ಮೋದಿ ಸುನಾಮಿ': ಬಿಜೆಪಿ
ನಾಲ್ಕು ರಾಜ್ಯಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜಾದು ಮಾಡುತ್ತಿದ್ದು, ಉತ್ತರಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶನಿವಾರ ಹೇಳಿದೆ...

Published On :
ಬೆಂಗಳೂರು: ನಾಲ್ಕು ರಾಜ್ಯಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜಾದು ಮಾಡುತ್ತಿದ್ದು, ಉತ್ತರಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶನಿವಾರ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಎಸ್. ಪ್ರಕಾಶ್ ಅವರು, ಮೋದಿ ಅಲೆಯನ್ನು ಇನ್ನು ಮುಂದೆ ಮೋದಿ ಸುನಾಮಿಯಂತೆ ನೋಡಬಹುದು. ಚುನಾವಣೋತ್ತರ ಫಲಿತಾಂಶವನ್ನೇ ಗಮನಿಸುವುದಾದರೆ, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ ಎಂದು ಹೇಳಲಾಗಿದೆ. ಉತ್ತರಪ್ರದೇಶ, ಉತ್ತರಾಖಂಡ, ಮಣಿಪುರ ಮತ್ತು ಗೋವಾದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ತಿಳಿಸಲಾಗಿದೆ. ಇನ್ನು ಕೆಲವೇ ಸಮಯದಲ್ಲಿ ಮೋದಿ ಅಲೆಯನ್ನು ನಾವು ಮೋದಿ ಸುನಾಮಿಯಾಗಿ ನೋಡಬಹುದಾಗಿದೆ. ಮೋದಿಯವರ ಜಾದೂವಿನಿಂದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆ ಹಾಗೂ ಆರ್ಥಿಕ ಸುಧಾರಣೆಗಳ ಅಗ್ನಿಪರೀಕ್ಷೆ ಎಂದೇ ಬಣ್ಣಿಸಲಾಗಿರುವ ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


