ಗುದದ್ವಾರದಲ್ಲಿ 35 ಲಕ್ಷ ರು. ಮೌಲ್ಯದ ಚಿನ್ನದ ಗಟ್ಟಿಸಾಗಿಸುತ್ತಿದ್ದ ವ್ಯಕ್ತಿಯ ಬಂಧನ
: ಗುದದ್ವಾರದಲ್ಲಿ ಹಾಗೂ ದೇಹದ ಇತರ ಭಾಗಗಳಲ್ಲಿ ಮುಚ್ಚಿಟ್ಟುಕೊಂಡು ಚಿನ್ನದ ಗಟ್ಟಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೊಯಂಬತ್ತೂರಿನಲ್ಲಿ ಡಿಐರ್ ಐ ಅ ಅಧಿಕಾರಿಗಳು ...

ಕೊಯಂಬತ್ತೂರು: ಗುದದ್ವಾರದಲ್ಲಿ ಹಾಗೂ ದೇಹದ ಇತರ ಭಾಗಗಳಲ್ಲಿ ಮುಚ್ಚಿಟ್ಟುಕೊಂಡು ಚಿನ್ನದ ಗಟ್ಟಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೊಯಂಬತ್ತೂರಿನಲ್ಲಿ ಡಿಐರ್ ಐ ಅ ಅಧಿಕಾರಿಗಳು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ಶಾರ್ಜಾದಿಂದ ಆಗಮಿಸಿದ್ದ ಕೇರಳ ಮೂಲದ ಮಲ್ಲಾಪ್ಪುರಾಂ ನ ಕೋಲಮುಕಾತ್ ಕರೀಮ್ ಸಾಜಿದ್(36) ಎಂಬಾತನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.
ಏರ್ ಅರೇಬಿಯಾ ವಿಮಾನದಲ್ಲಿ ಆಗಮಿಸಿದ್ದ ಕೋಲಮುಕಾಥ್ ನ ಸಂಶಯಾಸ್ಪದ ಚಲನವಲನಗಳನ್ನು ಗಮನಿಸಿದ ಅಧಿಕಾರಿಗಳು ಆತನನ್ನು ಪರೀಕ್ಷಿಸಿದ್ದಾರೆ. ಆ ವೇಳೆ ಆತ ತನ್ನ ಗುದದ್ವಾರ ಹಾಗೂ ದೇಹದ ಇತರೆ ಭಾಗಗಳಲ್ಲಿ ಮುಚ್ಚಿಟ್ಟು ಸುಮಾರು 35 ಲಕ್ಷ ರು. ಮೌಲ್ಯದ 1.16 ಕೆಜಿ ಚಿನ್ನವನ್ನು ಕಳ್ಳ ಸಾಗಾಟ ಮಾಡುತ್ತಿದ್ದುದ್ದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಚಿನ್ನವನ್ನು ಜಪ್ತಿ ಮಾಡಿರುವ ಅಧಿಕಾರಿಗಳು ಆತನನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


