ದೇಶ

ಶ್ರೀಲಂಕಾದಿಂದ 77 ಭಾರತೀಯ ಮೀನುಗಾರರ ಬಿಡುಗಡೆ

ಓರ್ವ ಭಾರತೀಯ ಮೀನುಗಾರನನ್ನು ಬಲಿ ಪಡೆದ ಗುಂಡಿನ ದಾಳಿ ಪ್ರಕರಣ ಸಂಬಂಧ ಕಳೆದ ಶನಿವಾರ ಬಂಧನಕ್ಕೊಳಗಾಗಿದ್ದ 85....

ಶ್ರೀಲಂಕಾದಿಂದ 77 ಭಾರತೀಯ ಮೀನುಗಾರರ ಬಿಡುಗಡೆ
ಸಾಂಧರ್ಬಿಕ ಚಿತ್ರ
Published On :
ನವದೆಹಲಿ: ಓರ್ವ ಭಾರತೀಯ ಮೀನುಗಾರನನ್ನು ಬಲಿ ಪಡೆದ ಗುಂಡಿನ ದಾಳಿ ಪ್ರಕರಣ ಸಂಬಂಧ ಕಳೆದ ಶನಿವಾರ ಬಂಧನಕ್ಕೊಳಗಾಗಿದ್ದ 85 ಭಾರತೀಯ ಮೀನುಗಾರರ ಪೈಕಿ 77 ಮೀನುಗಾರರನ್ನು ಶನಿವಾರ ಶ್ರೀಲಂಕಾ ಬಿಡುಗಡೆ ಮಾಡಿದೆ.
ಬಿಡುಗಡೆಯಾಗಿರುವ ಮೀನುಗಾರರು ಸದ್ಯ ಜಫ್ನಾದಲ್ಲಿದ್ದು, ಶೀಘ್ರದಲ್ಲೇ ಭಾರತಕ್ಕೆ ಬರಲಿದ್ದಾರೆ. ಆದರೆ ಜಪ್ತಿ ಮಾಡಿರುವ ಮೀನುಗಾರರ ಬೋಟ್ ಗಳು ಶ್ರೀಲಂಕಾದಲ್ಲಿ ಉಳಿಯಲಿವೆ.
85 ಭಾರತೀಯ ಮೀನುಗಾರರ ಪೈಕಿ 77 ಮಂದಿಯನ್ನು ಶ್ರೀಲಂಕಾ ಸರ್ಕಾರ ಬಿಡುಗಡೆ ಮಾಡಿದ್ದು, ಉಳಿದ ಮೀನುಗಾರರನ್ನು ಶೀಘ್ರದಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಗೋಪಾಲ್ ಬಗ್ಲಾಯ್ ಅವರು ತಿಳಿಸಿದ್ದಾರೆ.
ಶ್ರೀಲಂಕಾ ನೌಕಾಪಡೆ ಭಾರತೀಯ ಮೀನುಗಾರನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.