ದೇಶ

ಬಿಜೆಪಿಗೆ ಮಣಿಪುರದಲ್ಲಿ ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ ಸಿಗಲಿದೆ: ರಾಮ್ ಮಾಧವ್

ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ರಚಿಸುವುದಕ್ಕೆ ಅಗತ್ಯವಿರುವ ಸಂಖ್ಯಾಬಲವನ್ನು ಬಿಜೆಪಿ ಗಳಿಸಲಿದೆ ಎಂದು ಹೇಳಿದ್ದಾರೆ.

ಬಿಜೆಪಿಗೆ ಮಣಿಪುರದಲ್ಲಿ ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ ಸಿಗಲಿದೆ: ರಾಮ್ ಮಾಧವ್
ರಾಮ್ ಮಾಧವ್
Published On :
ಇಂಫಾಲ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶಗಳ ಪ್ರಕಟವಾಗಿದ್ದು ಮಣಿಪುರ, ಗೋವಾದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಎರಡೂ ರಾಜ್ಯಗಳಲ್ಲಿ ಸರ್ಕಾರ ರಚಿಸುವುದಾಗಿ ಬಿಜೆಪಿ ಹೇಳುತ್ತಿದೆ. ಮಣಿಪುರದಲ್ಲಿ ಸರ್ಕಾರ ರಚಿಸುವ ಬಗ್ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ರಚಿಸುವುದಕ್ಕೆ ಅಗತ್ಯವಿರುವ ಸಂಖ್ಯಾಬಲವನ್ನು ಬಿಜೆಪಿ ಗಳಿಸಲಿದೆ ಎಂದು ಹೇಳಿದ್ದಾರೆ. 
ಮಣಿಪುರದಲ್ಲಿ ಜನತೆ ಕಾಂಗ್ರೆಸ್ ನ್ನು ತಿರಸ್ಕರಿಸುವುದು ಸ್ಪಷ್ಟವಾಗಿದೆ. ಬಿಜೆಪಿ ಸರ್ಕಾರ ರಚಿಸಲು ಇತರ ಪಕ್ಷಗಳು ಹಾಗೂ ಪಕ್ಷೇತರರು ಬೆಂಬಲ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ರಾಮ್ ಮಾಧವ್ ಹೇಳಿದ್ದಾರೆ. 60 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಣಿಪುರದಲ್ಲಿ ಬಿಜೆಪಿ 21 ಸ್ಥಾನಗಳನ್ನು ಪಡೆದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.