ಪಂಚರಾಜ್ಯಗಳ ಚುನಾವಣೆ ಫಲಿತಾಂಶ: ಬಿಜೆಪಿ ಅಭಿನಂದಿಸಿದ ನಿತಿಶ್ ಕುಮಾರ್
ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ....

Published On :
ಪಾಟ್ನಾ: ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಭಾನುವಾರ ಅಭಿನಂದನೆ ಸಲ್ಲಿಸಿದ್ದಾರೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯ ನೋಟ್ ನಿಷೇಧ ನಿರ್ಧಾರ ಬೆಂಬಲಿಸಿದ್ದ ನಿತಿಶ್ ಕುಮಾರ್ ಅವರು, ಪ್ರತಿಪಕ್ಷಗಳು ನೋಟ್ ನಿಷೇಧಕ್ಕೆ ಸಿಕ್ಕ ಜನ ಬೆಂಬಲವನ್ನು ಕಡೆಗಣಿಸಿದವು ಎಂದು ಟ್ವೀಟ್ ಮಾಡಿದ್ದಾರೆ.
ನೋಟ್ ನಿಷೇಧದ ಬಗ್ಗೆ ಬಡವರಿಗೆ ಸಂಪೂರ್ಣ ತೃಪ್ತಿ ಇದೆ. ಹೀಗಾಗಿ ಪ್ರತಿಪಕ್ಷಗಳು ಅದನ್ನು ವಿರೋಧಿಸಬಾರದಿತ್ತು ಎಂದು ಹೇಳಿದ್ದಾರೆ.
ಆರಂಭದಲ್ಲಿ ಕೇಂದ್ರ ಸರ್ಕಾರದ ನೋಟ್ ನಿಷೇಧ ನಿರ್ಧಾರ ಬೆಂಬಲಿಸಿದ್ದ ಬಿಹಾರ ಸಿಎಂ, ನಂತರ ಅದನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


