ಸರ್ಕಾರ ರಚನೆಗೆ ವಿಫಲ: ಗೋವಾ ಜನತೆ ಕ್ಷಮೆ ಕೋರುತ್ತೇವೆ- ದಿಗ್ವಿಜಯ್ ಸಿಂಗ್
ಗೋವಾದಲ್ಲಿ ಸರ್ಕಾರ ರಚಿಸಲು ವಿಫಲವಾಗಿರುವುದಕ್ಕೆ ಜನತೆಯಲ್ಲಿ ಕ್ಷಮೆ ಕೋರುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

Published On :
ನವದೆಹಲಿ: ಗೋವಾದಲ್ಲಿ ಮನೋಹರ್ ಪರಿಕ್ಕರ್ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗುತ್ತಿದೆ. ಕಾಂಗ್ರೆಸ್ ಪಕ್ಷ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸರ್ಕಾರ ರಚಿಸಲು ವಿಫಲವಾಗಿರುವುದಕ್ಕೆ ಜನತೆಯಲ್ಲಿ ಕ್ಷಮೆ ಕೋರುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಜನಾದೇಶದ ವಿರುದ್ಧ, ಜನರ ಶಕ್ತಿಯ ವಿರುದ್ಧ ಹಣದ ಬಲ ಗೆದ್ದಿದೆ. ಅತಿ ಹೆಚ್ಚು ಸ್ಥಾನಗಳಿಸಿದ್ದರ ಹೊರತಾಗಿಯೂ ಸರ್ಕಾರ ರಚನೆಗೆ ಅಗತ್ಯವಿರುವ ಬಹುಮತವನ್ನು ಗಳಿಸಿ ಅಧಿಕಾರ ಹಿಡಿಯಲು ಕಾಂಗ್ರೆಸ್ ವಿಫಲವಾಗಿರುವುದಕ್ಕೆ ಗೋವಾ ಜನತೆಯಲ್ಲಿ ಕ್ಷಮೆ ಕೋರುತ್ತೇನೆ ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಗೋವಾದಲ್ಲಿ ಸರ್ಕಾರ ರಚನೆ ಮಾಡಲು ಸಾಧ್ಯವಾಗದೇ ಇದ್ದರೂ ಸಹ ಕಾಂಗ್ರೆಸ್ ಪಕ್ಷ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ನಡೆಸಲಿದೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಅತಂತ್ರ ಫಲಿತಾಂಶ ಎದುರಾಗಿದ್ದ ಗೋವಾದಲ್ಲಿ ಬಿಜೆಪಿ ಪಕ್ಷೇತರರು, ಎಂಜಿಪಿ ಸೇರಿದಂತೆ ಇತರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವುದು ಖಚಿತವಾಗಿದ್ದು, ಮನೋಹರ್ ಪರಿಕ್ಕರ್ ಮಾ.14 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


